ಪಂಬೆತ್ತಾಡಿಯಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ತಹಶೀಲ್ದಾರ್ ದಾಳಿ


ಪಂಜದ ಪಂಬೆತ್ತಾಡಿಯಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸುಳ್ಯ ತಹಶೀಲ್ದಾರ್ ದಿಢೀರ್ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಪಂಬೆತ್ತಾಡಿಯಲ್ಲಿ ಭೈರ ಮತ್ತು ರಮೇಶ್ ಎಂಬುವರು 1.5 ಎಕ್ರೆ ಜಾಗದಲ್ಲಿ ಪರವಾನಿಗೆ ಇಲ್ಲದೆ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಈ ಗಣಿಗಾರಿಕೆಯಿಂದ ಧೂಳು ಉಂಟಾಗುತ್ತಿದ್ದು ಸ್ಥಳೀಯರಲ್ಲಿ ಕೆಮ್ಮು ಮತ್ತು ಇತರ ಕಾಯಿಲೆ ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಸ್ಥಳೀಯವಾಗಿ ದೂರು ಬಂದಿದ್ದು ಗಂಭೀರವಾಗಿ ಪರಿಗಣಿಸಿದ್ದ ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರು ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೈರಾ ಮತ್ತು ರಮೇಶ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದು ಕೇಸು ದಾಖಲಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಯಂತ್ರೋಪಕರಣಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.