ಒಂದು ಗ್ರಾಮವನ್ನು ಅಭಿವೃದ್ಧಿಪಡಿಸಲಾಗದ ಸಂಸದರು ಜಿಲ್ಲೆಯನ್ನು ಎಷ್ಟು ಅಭಿವೃದ್ಧಿಮಾಡಿಯಾರು? : ಕಾಂಗ್ರೆಸ್

Advt_Headding_Middle
Advt_Headding_Middle

5 ವರ್ಷದಲ್ಲಿ ಒಂದು ಗ್ರಾಮವನ್ನು ಅಭಿವೃದ್ಧಿಪಡಿಸಲಾಗದ ಸಂಸದ ನಳಿನ್‌ಕುಮಾರ್ ಕಟೀಲ್‌ರವರು ಜಿಲ್ಲೆಯನ್ನು ಅಭಿವೃದ್ಧಿಪಡಿಸಲು ಹೇಗೆ ಸಾಧ್ಯ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡರು ಪ್ರಶ್ನಿಸಿದ್ದಾರೆ.


ಮಾ. 22ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಆದರ್ಶ ಗ್ರಾಮ ಯೋಜನೆಯಲ್ಲಿ ಸಂಸದ ನಳಿನ್‌ರವರು ಜಿಲ್ಲೆಯಲ್ಲಿ ನಮ್ಮ ತಾಲೂಕಿನ ಬಳ್ಪ ಗ್ರಾಮವನ್ನು ಆಯ್ದುಕೊಂಡರು. ಆದರೆ 5 ವರ್ಷದಲ್ಲಿ ಅವರು ಪಡೆದ ಗ್ರಾಮವನ್ನು ಅಭಿವೃದ್ಧಿ ಪಡಿಸಲು ಅವರಿಂದ ಸಾಧ್ಯವಾಗಿಲ್ಲ. ಅದಕ್ಕಾಗಿ ವಿಶೇಷ ಅನುದಾನವನ್ನು ಅವರು ತರಿಸಲು ಅವರಿಂದ ಸಾಧ್ಯವಾಗಿಲ್ಲ. ಹೀಗಿದ್ದಾಗ ಜಿಲ್ಲೆಯ ಅಭಿವೃದ್ಧಿ ಎಷ್ಟರಮಟ್ಟಿಗೆ ಆದೀತು ಎಂಬುದನ್ನು ನಾವು ಯೋಚಿಸಿ ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದು ವೆಂಕಪ್ಪ ಗೌಡರು ಹೇಳಿದರು. ಮತ್ತೂ ಮುಂದುವರಿದು ಮಾತನಾಡಿದ ವೆಂಕಪ್ಪ ಗೌಡರು, ಜಿಲ್ಲೆಯಲ್ಲಿ ಆಗಬೇಕಾದ ಕೆಲಸ, ಅಡಿಕೆಧಾರಣೆ ಕಡಿಮೆಯಾಗಿರುವುದು, ರೆಫೆಲ್ ಯುದ್ಧ ವಿಮಾನ ಹಗರಣ ಮತ್ತಿತರ ವಿಷಯಗಳ ಕುರಿತು ಮಾತನಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನಂದರಾಜ್ ಸಂಕೇಶ್, ಲಕ್ಷ್ಮಣ ಶೆಣೈ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.