ಕನಕಮಜಲು: ಬಾಳೆಹಿತ್ತಿಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ

Advt_Headding_Middle
Advt_Headding_Middle

 


ಕನಕಮಜಲು ಗ್ರಾಮದ ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವವು ಮಾ.27ಹಾಗೂ 28ರಂದು ಜರುಗಿತು.


ಮಾ.27ರಂದು ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆದು ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಕುಳ್ಚಾಟ(ವಿಷ್ಣುಲೀಲೆ) ಜರುಗಿತು.


ಮಾ.28ರಂದು ಪ್ರಾತ:ಕಾಲ ಶ್ರೀ ವಿಷ್ಣುಮೂರ್ತಿ ದೈವದ ಮೇಲೇರಿ ಪ್ರವೇಶ, ಮಾರಿಕಳ, ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಪ್ರ.ಕಾರ್ಯದರ್ಶಿ, ಆಡಳಿತ ಮೊಕ್ತೇಸರರು, ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.