Breaking News

ಚರಿತ್ರೆ ಬದಲಿಸುವ ಚುನಾವಣೆ : ಗಣೇಶ್ ಕಾರ್ಣಿಕ್

Advt_Headding_Middle
Advt_Headding_Middle

ಮುಂಬರುವ ಲೋಕಸಭಾ ಚುನಾವನೆಯು ದೇಶದ ಪಾಲಿಗೆ ಚರಿತ್ರೆ ಬದಲಿಸುವ ಮಹತ್ವದ ಚುನಾವಣೆಯಾಗಲಿದೆ. ಗಟ್ಟಿ ನಿಲುವಿನ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಎಲ್ಲರೂ ಪಣತೊಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಸುಳ್ಯ ಮಂಡಲ ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದರು.

ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ ಸಮಾವೇಶ ಉದ್ಘಾಟಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ವಂದಿಸಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ನಳಿನ್‌ಕುಮಾರ್ ಕಟೀಲ್, ಸುಳ್ಯ ಶಾಸಕ ಎಸ್.ಅಂಗಾರ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ ನಾಯಕ್,  ಮಾಜಿ ಶಾಸಕರಾದ ನಾಗರಾಜ ಶೆಟ್ಟಿ, ಯೋಗೀಶ್ ಭಟ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ ಮಿಜಾರು, ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಸುಳ್ಯ ಮಂಡಲ ಸಂಚಾಲಕ ಹರೀಶ್ ಕಂಜಿಪಿಲಿ, ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಕಣೆಮರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.