Breaking News

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ದೇಣಿಗೆ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ ವೀರೇಂದ್ರ ಹೆಗ್ಗಡೆಯವರು ಕಳಂಜ ಗ್ರಾಮದ ಅಯ್ಯನಕಟ್ಟೆ ಶ್ರೀ ಇಷ್ಟ ದೇವತಾ ಉಳ್ಳಾಕುಲು ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಂಜೂರು ಮಾಡಿದ ರೂ. ೨ ಲಕ್ಷದ ಡಿ.ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ ನೆಲ್ಯಾಡಿಯವರು ಮೊಕ್ತೇಸರರಾದ ರಾಮಚಂದ್ರ ರಾವ್ ಬಾಳಿಲರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್‌ಕುಮಾರ್ ರೈ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಭಾರತಿ, ಸೇವಾ ಪ್ರತಿನಿಧಿ ಸೌಮ್ಯ ಕೆ., ಒಕ್ಕೂಟದ ಅಧ್ಯಕ್ಷರುಗಳಾದ ನಾರಾಯಣ ಕಳಂಜ, ಐತಪ್ಪ, ಒಕ್ಕೂಟ ಪದಾಧಿಕಾರಿಗಳು, ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದ ಕಾರ್ಯಾಧ್ಯಕ್ಷ ಸುಧಾಕರ ರೈ, ಪ್ರ.ಕಾರ್ಯದರ್ಶಿ ಪಿ.ಜಿ.ಎಸ್.ಎನ್.ಪ್ರಸಾದ, ಉಪಾಧ್ಯಕ್ಷ ಟಿ.ಲಿಂಗಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಗೌಡ, ಸುಬ್ರಹ್ಮಣ್ಯ ಮುಂಡುಗಾರು, ವಾಸುದೇವ ಆಚಾರ್ಯ, ಎಂ.ಕೂಸಪ್ಪ ಗೌಡ, ಸಂಧ್ಯಾ ಬಿ.ಎನ್. ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ಅಧಿಕಾರಿಗಳು,ವಲಯ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.