ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ

Advt_Headding_Middle
Advt_Headding_Middle

ಶ್ರೀ ಭಗವತೀ ಸಾನಿಧ್ಯ ಬಂಧವಿರುವ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವವು ಶ್ರೀ ಚೆನ್ನಕೇಶವ ದೇವಸ್ಥಾನದ ರಾಜಗೋಪುರದ ಎದುರುಗಡೆ ಮಾ.29 ರಂದು ನಡೆಯಿತು.

ಬೆಳಿಗ್ಗೆ ಅಣ್ಣಪ್ಪ ಪಂಜುರ್ಲಿ ಮತ್ತು ರಕ್ತೇಶ್ವರಿ ಮತ್ತು ಇತರ ದೈವಗಳಿಗೆ ತಂಬಿಲ ನಡೆಯಿತು.
ರಾತ್ರಿ ಅನ್ನಸಂತರ್ಪಣೆ ನಡೆಯಿತು.

 

ರಾತ್ರಿ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ನಂತರ ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ದೈವದ ಆಡಳಿತದಾರ ಕೆ.ರಾಮಕೃಷ್ಣ ರಾವ್ ಮುರೂರು ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.