Breaking News

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಸುಳ್ಯ ಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವವು ಎ.13 ರಿಂದ 19 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಮಾ.31 ರಂದು ದೇವಳದ ಸಭಾಂಗಣದಲ್ಲಿ ವ್ಯ.ಸ.ಅಧ್ಯಕ್ಷ ಕೇಶವ ಯು.ಕೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜೀ.ಸ.ಅಧ್ಯಕ್ಷ ಪಿ.ಬಿ.ದಿವಾಕರ ರೈಯವರು ಜಾತ್ರೋತ್ಸವದ ಪೂರ್ವ ತಯಾರಿಯ ಕುರಿತು ವಿವರ ನೀಡಿದರು. ಈ ಸಂದರ್ಭದಲ್ಲಿ ಉಪಸಮಿತಿಗಳನ್ನು ರಚಿಸಿ ಸಂಚಾಲಕರನ್ನು ನೇಮಿಸಿ ಜವಬ್ದಾರಿ ಹಂಚಲಾಯಿತು. ಸೀಮೆಗೆ ಸಂಬಂಧಪಟ್ಟ ಗ್ರಾಮಗಳಿಗೆ ಆಮಂತ್ರಣ ಪತ್ರಿಕೆ ಹಂಚಿ ಸ್ವಯಂಸೇವಕರಾಗಿ ಸಹಕರಿಸುವ ಸಂಘ ಸಂಸ್ಥೆಗಳಿಗೆ ಪತ್ರ ಕಳುಹಿಸುವಂತೆ ನಿರ್ಧರಿಸಲಾಯಿತು..ವ್ಯ.ಸ
ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದರು.ದೇವಳದ ಸಿಬ್ಬಂದಿ ವರ್ಗದವರು ಸಹಕರಿಸಿದರು.ಜಾತ್ರೋತ್ಸವದ ಪ್ರಯುಕ್ತ ಇಂದು(ಎ.1 ರಂದು) ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿರುವುದು ಎಂದು ಅಧ್ಯಕ್ಷರು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.