Breaking News

ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

2019-20ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ  www.karnataka.gov.in/dbcdc ಲಾಗಿನ್ ಆಗಿ ವೆಬ್‌ಸೈಟ್‌ನಲ್ಲಿ ಲಭ್ಯವಿರುವ username-arivu ಮತ್ತು passward-arivu@123 ನಮೂದಿಸಿ ಅರ್ಜಿಯನ್ನು ಅನ್‌ಲೈನ್‌ಲ್ಲಿ ಭರ್ತಿ ಮಾಡುವುದು ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್ / ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಿ.ಇ.ಟಿ/ ನೀಟ್ ಪ್ರವೇಶ ಪರೀಕ್ಷೆ ಆಡ್ಮಿಷನ್ ಟಿಕೆಟ್ ಈ ದಾಖಲೆಗಳನ್ನು ಸ್ಕೇನ್ ಮಾಡಿ ಅರ್ಜಿಯೊಂದಿಗೆ ಅನ್‌ಲೈನ್‌ಲ್ಲಿ ಮೇ.೨೪ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿಯು ಒಂದೇ ಜಿಲ್ಲೆಯಲ್ಲಿ ಅರ್ಜಿಯನ್ನು ಆನ್‌ಲೈನ್‌ಲ್ಲಿ ಸಲ್ಲಿಸಬೇಕು. ಹೆಚ್ಚಿನ ಜಿಲ್ಲೆಯಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು.(0820-2574882/8197249898/8095267259)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.