HomePage_Banner
HomePage_Banner
HomePage_Banner
Breaking News

ಮೇ.21 : ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಶಿಬಿರದ ಸಮಾಪನ, ಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ


ಸುಳ್ಯ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆದ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಸಮಾರಂಭವು ಹಾಗೂ ಶ್ರೀ ಕೇಶವ ಸ್ಮೃತಿ 2019 ಪ್ರಶಸ್ತಿ ಪ್ರದಾನ ಸಮಾರಂಭ ಮೇ. 21 ರಂದು ಕೇಶವ ಕೃಪಾ ಸಭಾಂಗಣದಲ್ಲಿ ರಾಜಗೋಪಾಲ ಭಟ್ ಉಂಡೆಮನೆಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು. ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳಾದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು. ಸ್ವರ್ಣ ಉದ್ಯಮಿಗಳಾದ ಬಲರಾಮ ಆಚಾರ್ಯ ರವರು ಪ್ರಶಸ್ತಿ ಪ್ರದಾನ ಮಾಡಲಿರುವರು. ಎಂ.ಎಸ್ ನಾಗರಾಜ್ ರಾವ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸರಾದ ವೇ| ಮೂ| ಪುರುಷೋತ್ತಮ ಭಟ್ ಮೇರ್ಕಜೆ, ಯೋಗ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡಿತ್ತಾಯ, ಸ್ಯಾಕ್ಸೋಫೋನ್ ವಾದಕ ಬಾಲಚಂದ್ರ ಪೆರಾಜೆಯವರಿಗೆ 2019 ರ ಶ್ರೀ ಕೇಶವ ಸ್ಮೃತಿ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು. ಈ ಸಂದರ್ಭದಲ್ಲಿ ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ. ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುತ್ತಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬ್ರಹ್ಮಶ್ರೀ ವೇ| ಮೂ| ಪುರೋಹಿತ ನಾಗರಾಜ ಭಟ್, ವೇ| ಮೂ| ಸುದರ್ಶನ ಭಟ್ , ವೇ| ಮೂ| ಅಭಿರಾಮ ಶರ್ಮ , ಶಿಬಿರ ಸಂಚಾಲಕ ಎಂ.ಎಸ್ ನಾಗರಾಜ ರಾವ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.