HomePage_Banner
HomePage_Banner
HomePage_Banner

ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೇ. ೧೯ ಮತ್ತು ೨೦ರಂದು ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಕೆ.ಯಂ. ದಾಮೋದರ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

 

ಮೇ. ೧೯ರಂದು ಸಾರ್ವಜನಿಕ ಸತ್ಯನಾರಾಯಣ ಪೂಜೆ, ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಾಸಾದ ಶುದ್ಧಿ,  ರಾಕ್ಷೊಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮೇ. ೨೦ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಬಳಿಕ ಶ್ರೀ ದೇವರ ಬಲಿ ಹೊರಟು ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂಗಳಾರತಿ, ಮಂತ್ರಾಕ್ಷತೆ, ಸಂಪ್ರೋಕ್ಷಣೆ, ತೀರ್ಥಪ್ರಸಾದ, ಅನ್ನಸಂತರ್ಪಣೆ ನಡೆಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಜನಾ ಕಾರ್ಯಕ್ರಮ, ಬೆಳ್ಳಾರೆ ಶ್ರೀ ದುರ್ಗಾ ನೃತ್ಯ ಕಲಾ ತಂಡದಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ರಾತ್ರಿ ಹೇಮಾವತಿ ಕುರಿಯಾಜೆಯವರ ಭಾಗವತಿಕೆಯಲ್ಲಿ ಒಂದು ತಾಸು ಯಕ್ಷಗಾನ ನಡೆಯಿತು. ಬೆಳ್ಳಾರೆ ಯಕ್ಷರಂಗ ತಂಡದವರಿಂದ ವೀರಮಣಿ ಕಾಳಗ ಯಕ್ಷಗಾನ ಬಯಲಾಟ ನಡೆಯಿತು.

 

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ.ಕೆ. ಸೂರ್‍ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯರು, ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಪಿ.ಆರ್.ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ದನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.