ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಬೆಳೆ ವಿಮೆ ಕಾರ್ಯಕ್ರಮವನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ  ಕಾರ್ಯಕ್ರಮದಲ್ಲಿ ೨೦೧೯ ಮುಂಗಾರು ಹಂಗಾಮಿಗೆ ಅನ್ವಯಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಯೋಜನೆಯು ಕೇಂದ್ರ ಸರಕಾರ ನೀಡಿರುವ ಮಾನದಂಡಗಳ ಆಧಾರದಲ್ಲಿ ತೋಟಗಾರಿಕೆ ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಉಂಟಾದಲ್ಲಿ ವಿಮಾ ನಷ್ಟ ಪರಿಹಾರವನ್ನು ಪಡೆಯಲು ಅವಕಾಶವನ್ನು ಕಲ್ಪಿಸುತ್ತದೆ.
೨೦೧೯ ನೇ ಮುಂಗಾರು ಹಂಗಾಮಿಗೆ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದೆ. ೨೦೧೯ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಜೂ.೩೦ರಂದು ಅಂತಿಮ ದಿನವಾಗಿರುತ್ತದೆ. ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್‌ಗಳಿಂದ (ರಾಷ್ಟ್ರಿಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್‌ಗಳು) ಬೆಳೆ ಸಾಲ ಪಡೆದಿರುವ ರೈತರಿಗೆ ಕಡ್ಡಾಯವಾಗಿರುತ್ತದೆ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‌ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್‌ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಸಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯಡಿ ಅಧಿಸೂಚಿತ ತೋಟಗಾರಿಕೆ ಬೆಳೆಗಳನ್ನು ೨೦೧೯ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ಗ್ರಾಮ ಪಂಚಾಯತ್ (Unit Area of Insurance) ಮಟ್ಟದಲ್ಲಿ ಅನುಷ್ಠಾನಗೊಳಿಸಲು ಕರ್ನಾಟಕ ಸರಕಾರಿ ಆದೇಶ ಸಂ:Horti/34/HCM/2019-R and I-Horti-Sec ದಿನಾಂಕ ೨೨-೦೫-೨೦೧೯ರ ಮೂಲಕ ಅಧಿಸೂಚಿಸಲಾಗಿದೆ. ಈ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕರಿಮೆಣಸು ಬೆಳೆಗಳನ್ನು ಮುಂಗಾರು ಹಂಗಾಗೆ ಸೇರ್ಪಡೆಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ Oriental General Insurance company ಯವರನ್ನು ವಿಮಾ ಸಂಸ್ಥೆಯಾಗಿ ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ಅನುಸಾರ ಬೆಳೆ ಸಾಲ ಪಡೆಯುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಅಧಿಸೂಚಿತ ಬೆಳೆಗಳಿಗೆ ಈ ಕೆಳಗಿನಂತೆ ವಿಮಾ ಕಂತನ್ನು ಪಾವತಿಸಿ ವಿಮೆಯನ್ನು ಹೊಂದಬಹುದಾಗಿದೆ.
೮೮೧೭ ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ (ಆರ್.ಟಿ.ಸಿ.),ಉಳಿತಾಯ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರ್ಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ, ಸ್ವಯಂ ಘೋಸಿ ದೃಢೀಕರಿಸಿದ ಜಮಿನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿ, (ಜಿ.ಪಂ) ಮಂಗಳೂರು ೦೮೨೪-೨೪೨೩೬೨೮, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, (ಜಿ.ಪಂ.) ಸುಳ್ಯ ೦೮೨೫೭-೨೩೨೦೨೦ ಸಂಪರ್ಕಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.