HomePage_Banner
HomePage_Banner

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿಗಳ ಆರಂಭ

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ತರಗತಿ ಆರಂಭದ ಕಾರ್ಯಕ್ರಮವು ಜೂ.11ರಂದು ನಡೆಯಿತು. ಸ್ನಾತಕೋತ್ತರ ತರಗತಿಗಳ ಪ್ರಾರಂಭೋತ್ಸವದ ಜೊತೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವೂ ಜರುಗಿತು. ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್‌ರವರು ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಅಭಿನಂದಿಸಿ, ಕಾಲೇಜಿನಲ್ಲಿನ ಶಿಸ್ತು ಮತ್ತುಅಭ್ಯಾಸ ಕ್ರಮಗಳ ಬಗ್ಗೆ ವಿವರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾಪ್ರಸಾದ್ ಕೆ.ವಿ. ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ| ಶರತ್‌ಕುಮಾರ್ ಶೆಟ್ಟಿ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರುಗಳು ಸಂದರ್ಭೋಚಿತವಾಗಿ ಮಾತನಾಡಿದರು. ಎಲ್ಲಾ ನೂತನ 32 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಕೊನೆಯಲ್ಲಿವಿಭಾಗ ಮುಖ್ಯಸ್ಥರಾದ ಡಾ. ಹರಿಶ್ಚಂದ್ರ ರೈಯವರು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ವೃಂದ ಹಾಗೂ ನೂತನ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.