HomePage_Banner
HomePage_Banner

ಕನಕಮಜಲು: ಸ್ವಚ್ಛಮೇವ ಜಯತೆ ಆಂದೋಲನ ಕಾರ್ಯಕ್ರಮ

ಸ್ವಚ್ಛಭಾರತ ಮಿಷನ್ ಯೋಜನೆಯಡಿಯಲ್ಲಿ ಕೇಂದ್ರ ಸರಕಾರದ ವತಿಯಿಂದ ಸ್ವಚ್ಛಮೇವ ಜಯತೆ ಆಂದೋಲನ ಎಂಬ ಕಾರ್ಯಕ್ರಮವು ಕನಕಮಜಲು ಗ್ರಾಮ ಪಂಚಾಯತಿ ವಠಾರದಲ್ಲಿ ಜೂ.11ರಂದು ಜರುಗಿತು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಹಾಗೂ ಉಪಾಧ್ಯಕ್ಷ ಶ್ರೀಧರ ಕುತ್ಯಾಳ ಅವರು ಸ್ವಚ್ಚತಾ ಆಂದೋಲನದ ಕುರಿತು ಮಾತನಾಡಿ ಮಾಹಿತಿ ನೀಡಿದರು. ಕನಕಮಜಲು ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ, ಎ.ಎನ್.ಎಂ. ಸ್ವಚ್ಚತಾ ಜಾಥಾದಲ್ಲಿ ಭಾಗವಹಿಸಿದ್ದರು. ಪಿ.ಡಿ.ಒ. ಶ್ರೀಮತಿ ಸರೋಜಿನಿ ಅವರು ಸ್ವಚ್ಚತೆಯ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು. ಕನಕಮಜಲು ಪೇಟೆಯಲ್ಲಿ ಸ್ವಚ್ಚತಾ ಜಾಥ ನಡೆದ ಬಳಿಕ ಗ್ರಾಮ ಪಂಚಾಯತಿ ವಠಾರದಲ್ಲಿ ಗಿಡಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಜಯಲತ ಗಬ್ಬಲಡ್ಕ, ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಸದಸ್ಯರುಗಳಾದ ದಿವಾಕರ ಕಾಳಪ್ಪಜ್ಜನಮನೆ, ಶ್ರೀಮತಿ ಭವಾನಿ ಮಾಣಿಮಜಲು, ಶ್ರೀಮತಿ ಸವಿತ ಮಠ, ಶಾಲಾ ಎಸ್.ಡಿ.ಎಂ.ಸಿ. ಸದಸ್ಯ ಅಬ್ದುಲ್ ಹಮೀದ್, ಸ್ವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕೃತಿಕಾ , ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.