HomePage_Banner
HomePage_Banner

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛಮೇವ ಜಯತೆ ಸ್ಪರ್ಧಾ ಕಾರ್ಯಕ್ರಮ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಚ್ಛಮೇವ ಜಯತೆ ಕಾರ್ಯಕ್ರಮದಡಿಯಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಜೂ.16ರಂದು ನಡೆಸಲಾಯಿತು.

ಕಾರ್ಯಕ್ರಮವನ್ನು ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಗೋಪಾಲಕೃಷ್ಣ ಭಟ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಸೋಣಂಗೇರಿ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಚ್ಛಮೇವ ಜಯತೆ ಕಾರ್ಯಕ್ರಮದಡಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕಾಗಿದೆ ಎಂದರು.

ಬಳಿಕ ಸ್ವಚ್ಛತೆಯ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಪ್ರಬಂಧ ಸ್ಪರ್ಧೆಯನ್ನು ಹಾಗೂ ಚರ್ಚಾ ಸ್ಪರ್ಧೆಯನ್ನು ನಡೆಸಲಾಯಿತು. ಸೋಣಂಗೇರಿ ಕ್ಲಸ್ಟರ್ ಶಾಲೆಯ ಸುಮಾರು 40 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ನಿಶ್ಮಿತಾ ಪ್ರಥಮ, ಚರ್ಚಾ ಸ್ಪರ್ಧೆಯಲ್ಲಿ ವಿನಿಶಾ ಪ್ರಥಮ, ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಚರಣ್ ಐವರ್ನಾಡು ಪ್ರಥಮ, ಚರ್ಚಾ ಸ್ಪರ್ಧೆಯಲ್ಲಿ ಜ್ಞಾನೇಶ್ ವಿನೋಬನಗರ ಪ್ರಥಮ ಸ್ಥಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲರಾವ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ಐವರ್ನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸೂಫಿ ಪೆರಾಜೆ ಉಪಸ್ಥಿತರಿದ್ದರು. ವಿನೋಬನಗರ ಶಾಲೆಯ ಸಹಶಿಕ್ಷಕಿ ಪಾವನಾ ಸ್ವಾಗತಿಸಿ, ಸಹಶಿಕ್ಷಕ ಹರ್ಷಿತ್ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಕವಿತ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.