HomePage_Banner
HomePage_Banner
HomePage_Banner
Breaking News

ಪ್ರಾಥಮಿಕ ಶಾಲಾ ಶಿಕ್ಷಕರ ಸಾಮೂಹಿಕ ರಜೆ -ಶಾಲೆಗಳಲ್ಲಿ ಪಾಠ ಪ್ರವಚನಗಳಲ್ಲಿ ವ್ಯತ್ಯಯ -ಕೆಲವು ಶಾಲೆಗಳಿಗೆ ಬೀಗ

“ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ, ಪದವೀಧರ ಶಿಕ್ಷಕರ ಸಮಸ್ಯೆ ಮತ್ತು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಶಿಕ್ಷಕರು ಶಾಲೆಗಳಿಗೆ ಸಾಮೂಹಿಕ ರಜೆ ಹಾಕಿ ಜಿಲ್ಲಾ ಮಟ್ಟದಲ್ಲಿ ನಡೆಯುವ ಬೃಹತ್ ರ್‍ಯಾಲಿಗೆ ತೆರಳಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಶಾಲೆಗಳಲ್ಲಿ ಪಾಠ ಪ್ರವಚನಗಳಿಗೆ ವ್ಯತ್ಯಯ ಉಂಟಾಗಿದೆ.
ಸುಳ್ಯ ತಾಲೂಕಿನಿಂದ ಪ್ರಾಥಮಿಕ ಶಿಕ್ಷಕರ ಸಂಘದ ನೇತೃತ್ವದಲ್ಲಿ 300ಕ್ಕೂ ಅಧಿಕ ಶಿಕ್ಷಕರು ಮಂಗಳೂರಿನ ರ್‍ಯಾಲಿಗೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ತಾಲೂಕಿನ ಶಾಲೆಗಳಲ್ಲಿ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಕೆಲವು ಶಾಲೆಗಳಿಗೆ ವಿದ್ಯಾರ್ಥಿಗಳು ಬಂದು ಶಿಕ್ಷಕರಿಲ್ಲದೆ ತೆರಳಿರುವುದರಿಂದ ಶಾಲೆಗೆ ಬೀಗ ಹಾಕಲಾಗಿದೆ. ಸುಳ್ಯ ಸರಕಾರಿ ಮಾದರಿ ಶಾಲೆ ಹಾಗೂ ಗಾಂಧಿನಗರ ಶಾಲೆಯಲ್ಲಿ ಗೇಟು ಹಾಗೂ ಶಾಲೆಗೆ ಬೀಗ ಹಾಕಿದ ಪರಿಸ್ಥಿತಿ ಕಂಡುಬಂದಿದೆ.

ಸುಳ್ಯ ಮಾದರಿ ಶಾಲೆಗೆ ಬೀಗ      ಗಾಂಧಿನಗರ ಶಾಲೆಗೆ ಬೀಗ  ಕೊಡಿಯಾಲಬೈಲ್ ಸುಳ್ಯ

ಸುಬ್ರಹ್ಮಣ್ಯ, ಪ್ರಾಥಮಿಕ ಶಾಲೆ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯೋಪಾಧ್ಯಾಯರಿಗೆ ಆದೇಶಯೊಂದನ್ನು ಹೊರಡಿಸಿದ್ದು “ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಅನ್ವಯ ಹಕ್ಕೊತ್ತಾಯ ಪ್ರತಿಭಟನಾ ರ್‍ಯಾಲಿ ನಡೆಯಲಿದ್ದು ಸಾಂದರ್ಭಿಕ ರಜೆಯನ್ನು ಪಡೆಯದೇ ಇರುವ ಶಿಕ್ಷಕರು, ಅತಿಥಿ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು ಶಾಲೆಯನ್ನು ನಡೆಸುವುದು, ಮಧ್ಯಾಹ್ನದ ಬಿಸಿಯೂಟ ಹಾಗೂ ಮಕ್ಕಳ ಸುರಕ್ಷತೆಯ ಕಡೆಗೆ ಗಮನಹರಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ತಾಲೂಕಿನಲ್ಲಿರುವ ನೂರಕ್ಕೂ ಆಧಿಕ ಅತಿಥಿ ಶಿಕ್ಷಕರು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಹುತೇಕ ಶಾಲೆಗಳಲ್ಲಿ ಅಡುಗೆ ಸಿಬ್ಬಂದಿಗಳು ಕೂಡ ಶಾಲೆಗೆ ಬಂದಿದ್ದಾರೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಿಸುವ ಪರಿಸ್ಥಿತಿ ಬಂದಿಲ್ಲ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.