HomePage_Banner
HomePage_Banner

ಎನ್.ಎಸ್.ಎಸ್., ಸಂವಹನ ವೃದ್ಧಿಗೆ ಸಹಕಾರಿ : ಚರಣ್‌ ಐವರ್ನಾಡು

ವ್ಯಕ್ತಿಯ ವಿಕಸನಕ್ಕೆ ಪಠ್ಯ ಚಟುವಟಿಕೆಗಳಲ್ಲದೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ಎನ್.ಎಸ್.ಎಸ್. ವಿದ್ಯಾರ್ಥಿಯನ್ನು ಸಮಾಜದ ಮುಖ್ಯವಾಹಿನಿಯೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಸಮಾಜದಲ್ಲಿ ಭಿನ್ನಸ್ತರದ ಜನರೊಂದಿಗೆ ಬೆರೆಯಲು ಇದು ಅವಕಾಶ ಮಾಡಿಕೊಡುತ್ತದೆ ಎಂದು ನೆಹರು ಮೆಮೊರಿಯಲ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನಡೆದ “ಪ್ರಶಿಕ್ಷಣ” ಕಾರ್ಯಕ್ರಮದಲ್ಲಿ ಚರಣ್ ಐವರ್ನಾಡುರವರು ವಿದ್ಯಾರ್ಥಿಗಳನ್ನುದೇಶಿಸಿ ಮಾತನಾಡಿದರು.
ವಿದ್ಯಾರ್ಥಿದೆಸೆಯಿಂದಲೇ ತಮ್ಮಲ್ಲಿರುವ ಕೌಶಲ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು. ಜಾಗತೀಕರಣದ ಸಂದರ್ಭದಲ್ಲಿ ಬಹುಕೌಶಲ್ಯವನ್ನು ರೂಪಿಸಿಕೊಳ್ಳುವುದು ತುಂಬಾ ಅಗತ್ಯ. ವಿದ್ಯಾರ್ಥಿಗಳು ತಮ್ಮ ಓದಿನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಾಗ ವಿವೇಚಿಸುವ ಪ್ರವೃತ್ತಿ ಬೆಳೆಯುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಎಸ್.ಎಸ್. ಘಟಕಾಧಿಕಾರಿ ಶ್ರೀ ಸಂಜೀವ ಕುದ್ಪಾಜೆರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಚರಣ್ ಐವರ್ನಾಡುರವರು ಭಾಗವಹಿಸಿದ್ದರು. ಎನ್.ಎಸ್.ಎಸ್.ನ ಘಟಕಾಧಿಕಾರಿ ಕು. ಪಾವನ ಬಿ. ಅತಿಥಿಗಳನ್ನು ಸ್ವಾಗತಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.