HomePage_Banner
HomePage_Banner
HomePage_Banner

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜಲಾಮೃತ ಮಾಹಿತಿ ಕಾರ್ಯಕ್ರಮ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜಲಾಮೃತ ಮಾಹಿತಿ ಕಾರ್ಯಕ್ರಮವು ಜು.16ರಂದು ಜರುಗಿತು.

ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಚಂದ್ರಶೇಖರ ದಾಮ್ಲೆ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಮ್ಮ ಇಡೀ ಬದುಕು ಪಂಚ ಭೂತಗಳಿಂದ ಆವರಿಸಿ, ನೀರು ಅಮೂಲ್ಯವಾದದ್ದು, ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಇಂಗುಗುಂಡಿ ನಿರ್ಮಿಸಿ ನೀರು ಇಂಗಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲರಾವ್,ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಹಾಗೂ ಸಹಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೋಪಾಲರಾವ್ ಸ್ವಾಗತಿಸಿ, ಜಯಪ್ರಸಾದ್ ಕಾರಿಂಜ ವಂದಿಸಿದರು. ಸಹಶಿಕ್ಷಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.