HomePage_Banner
HomePage_Banner
HomePage_Banner

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಯೋಗಾಸನ ಸ್ಪರ್ಧೆ


ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ವಿದ್ಯಾಭಾರತಿ ಸಂಘದ ದ.ಕ.ಜಿಲ್ಲಾ ಘಟಕ ಇದರ ಆಶ್ರಯದಲ್ಲಿ ಯೋಗಾಸನ ಸ್ಪರ್ಧೆಯು ಜು.13ರಂದು ಜರುಗಿತು.


ವಿದ್ಯಾಸಂಸ್ಥೆಯ SDMC ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ BSNL ಅಧಿಕಾರಿ ಆರ್.ಕೆ.ಭಟ್, ವಿದ್ಯಾಭಾರತಿಯ ಪ್ರಾಂತ ಕಾರ್ಯದರ್ಶಿ ಷಣ್ಮುಖ ದೇವ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲೋಕಯ್ಯ ಶುಭಹಾರೈಸಿದರು. ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕರುಣಾಕರ, ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಪೈಚಾರ್, ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ.ಸೀತಾರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲರಾವ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಪವಿತ್ರ ಎಂ.ಕೆ. ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.