HomePage_Banner
HomePage_Banner
HomePage_Banner

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ 46 ನೇ ವರ್ಷದ ಸ್ಥಾಪನಾ ದಿನಾಚರಣೆ


ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ 46ನೇ ವರ್ಷದ ಸ್ಥಾಪನಾ ದಿನಾಚರಣೆಯನ್ನು ಜು.15 ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಅಮರಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಸೀತಾ ಹೆಚ್. ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಸಿ ವಿ ಆಗಮಿಸಿದ್ದರು. ಶಾಲಾ ಸಂಚಾಲಕರಾದ ಡಿ.ಸುಲೋಚನ ಗೌಡ, ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಸದಾಶಿವ ಗೌಡ ಮೂಕಮಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 2018-19 ನೆಯ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಚರಣ್, ಆಶಿತಾ, ರಾಜೇಶ್, ಮನೀಷಾ ಇವರಿಗೆ ಗೌರವಾರ್ಪಣೆ ಮಾಡಲಾಯಿತು.
ಶಾಲಾ ವಿದ್ಯಾರ್ಥಿನಿಯರಾದ ದಿವ್ಯಶ್ರೀ ಎಸ್ ಎನ್, ನವ್ಯಶ್ರೀ ಕೆ ಯು, ಭವ್ಯಾ ಕೆ, ರೀನಾ ಪಿ ಕೆ ಪ್ರಾರ್ಥಸಿದರು. ಚೊಕ್ಕಾಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಮೂಕಮಲೆ ಸ್ವಾಗತಿಸಿದರು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಹರಿಶ್ಚಂದ್ರ ಮೋಂಟಡ್ಕ ವಂದಿಸಿದರು. ಶಿಕ್ಷಕ ಹರಿಪ್ರಸಾದ ಕೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಗೆ ಭಿತ್ತಿ ಕಪಾಟನ್ನು(ಸ್ಪೋರ್ಟ್ಸ್ ಗ್ಯಾಲರಿ) ಕೊಡುಗೆಯಾಗಿ ರಜನಿಕಾಂತ್ ಉಮ್ಮಡ್ಕ ರವರು ಹಸ್ತಾಂತರಿಸಿದರು. ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು, ಸಮೂಹ ಸಂಸ್ಥೆಯ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.