HomePage_Banner
HomePage_Banner
HomePage_Banner
Breaking News

ಜು.22 ರಿಂದ 29: ಬೆಳ್ಳಾರೆಯಲ್ಲಿ ಮದ್ಯವರ್ಜನ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಕರ್ನಾಟಕ ರಾಜ್ಯ ಮಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ ನವಜೀವನ ಸಮಿತಿ ಬೆಳ್ಳಾರೆ ವಲಯ, ಊರ ಪರವೂರ ದಾನಿಗಳು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ 1377ನೇ ಮದ್ಯವರ್ಜನ ಶಿಬಿರವು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಜು. 22ರಿಂದ ಜು.29ರ ತನಕ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಕಳಂಜ ವಿಶ್ವನಾಥ್ ರೈ ತಿಳಿಸಿದರು.
ಜು.೧೮ರಂದು ಸುಳ್ಯ ಪ್ರೇಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಈ ವಿಷಯ ತಿಳಿಸಿದರು. ಜು. 22ರಂದು ಬೆಳಿಗ್ಗೆ 11.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉದ್ಘಾಟನೆಯನ್ನು ಬೆಳ್ಳಾರೆ ಜಿ.ಪಂ. ಕ್ಷೆತ್ರದ ಸದಸ್ಯ ಎಸ್.ಎನ್. ಮನ್ಮಥ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು 1377ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ವಿಶ್ವನಾಥ ರೈ ಕಳಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಸುಳ್ಯ ತಾಲೂಕು ಜನ ಜಾಗೃತಿ ವೆದಿಕೆಯ ಸದಸ್ಯೆ ಶ್ರೀಮತಿ ರಾಜೀವಿ ಆರ್ ರೈ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಧ್ಯಕ್ಷ ಸುನಿಲ್ ರೈ, ಬೆಳ್ಳಾರೆ ಕ್ಷೇತ್ರದ ತಾ.ಪಂ. ಸದಸ್ಯೆ ಶ್ರೀಮತಿ ನಳಿನಾಕ್ಷಿ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ರಿ. ಬೆಳ್ಳಾರೆ ಇದರ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಬೆಳ್ಳಾರೆ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ, ಜನ ಜಾಗೃತಿ ವೇದಿಕೆ ಬೆಳ್ಳಾರೆ ವಲಯದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ಭಾಗವಹಿಸಲಿದ್ದಾರೆ. ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ. ಜು. 29ರಂದು ಬೆಳಿಗ್ಗೆ ಗಂಟೆ 11.00ಕ್ಕೆ ತಾಲೂಕು ಜನಜಾಗೃತಿ ವೇದಿಕೆ ಅಧಿಕಾರ ಹಸ್ತಾಂತರ ಹಾಗೂ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಎಸ್. ಅಂಗಾರ, ಶ್ರೀ.ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಇದರ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ ಇದರ ಅಧಯಕ್ಷ ಎನ್.ಎ. ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ, ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಎಂ. ಬಿ. ಸದಾಶಿವ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್, ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ,1377ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ವಿಶ್ವನಾಥ ರೈ ಕಳಂಜ ಭಾಗವಹಿಸಲಿದ್ದಾರೆ. ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎನ್. ವಿಶ್ವನಾಥ ರೈ ಕಳಂಜ, ಉಪಾಧ್ಯಕ್ಷರುಗಳಾದ ಪ್ರದೀಪ್ ಕುಮಾರ್ ರೈ ಪನ್ನೆ, ಸುನಿಲ್ ರೈ ಪುಡ್ಕಜೆ, ಕರುಣಾಕರ ಗೌಡ ಬರೆಮೇಲು, ಪ್ರಧಾನ ಸಂಚಾಲಕರಾದ ಸತೀಶ್ ಶೆಟ್ಟಿ, ಸಂಚಾಲಕರಾದ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಯಾದ ಮುರಳೀಧರ ಎ, ಜತೆಕಾರ್ಯದರ್ಶಿಯಾದ ನವೀನ್ ಕುಮಾರ್ ಸಾರಕೆರೆ, ಕೋಶಾಧಿಕಾರಿಯಾದ ಗಂಗಾಧರ ರೈ ಪುಡ್ಕಜೆ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ಸಿಗೆ ದುಡಿಯಲಿದ್ದಾರೆ.
ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಮೇಲ್ವಿಚಾರಕ ಮುರಳೀಧರ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.