HomePage_Banner
HomePage_Banner
HomePage_Banner
HomePage_Banner

ಮಳೆ ಹಿನ್ನಲೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ದಕ್ಷಿಣ ಒಳನಾಡಿನಾಡಿ ಭಾರೀ ಮಳೆಯಾಗುವ ಸೂಚನೆ ಇದ್ದು, ಜುಲೈ 2೦ರಿಂದ 22 ರವರೆಗೆ ಪ್ರತಿದಿನ ತಲಾ 2೦ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿಯವರೆಗೆ) ಶನಿವಾರ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರಿಗೆ ಮೇಲಿನ ದಿನಾಂಕದಂದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರವಾಸಿಗರು ಮತ್ತು ಸಾರ್ವಜನಿಕರು, ನದಿತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.