HomePage_Banner
HomePage_Banner
HomePage_Banner

ಜಾಲ್ಸೂರು : ಸ್ತ್ರೀಶಕ್ತಿ ಗೊಂಚಲು ಮಹಾಸಭೆ

ಜಾಲ್ಸೂರು ಸ್ತ್ರೀಶಕ್ತಿ ಗೊಂಚಲು ಸಮಿತಿಯ ವಾರ್ಷಿಕ ಮಹಾಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.15ರಂದು ಜರುಗಿತು.

ಕಾರ್ಯಕ್ರಮದಲ್ಲಿ ಮಿನಿಜೋಸ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶಶಿಕಲಾ ಬೊಳುಬೈಲು, ಕಾರ್ಯದರ್ಶಿ ಸವಿತಾ ಪೆರುಮುಂಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೈಲಜಾ, ಶಿಶು ಅಭಿವೃದ್ಧಿ ಇಲಾಖೆಯ ಸರಸ್ವತಿ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎಸ್.ನಾಯಕ್, ಸ್ತ್ರೀಶಕ್ತಿ ಗೊಂಚಲಿನ ಮಾಜಿ ಅಧ್ಯಕ್ಷೆ ಚೆರಿಯಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಸವಿತಾ ಪೆರುಮುಂಡ ವಾಚಿಸಿದರು. ಸ್ವಚ್ಛತೆಯ ಬಗ್ಗೆ ಶಿಶು ಅಭಿವೃದ್ಧಿ ಇಲಾಖೆಯ ಸರಸ್ವತಿಯವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ತಿರುಮಲೇಶ್ವರಿ ಮರಸಂಕ, ಕಾರ್ಯದರ್ಶಿಯಾಗಿ ಗೀತಾ ಬೊಳುಬೈಲು ಆಯ್ಕೆಯಾದರು. ಸರಸ್ವತಿ ಎಂ. ಸ್ವಾಗತಿಸಿ, ಸೌಮ್ಯ ಕದಿಕಡ್ಕ ವಂದಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಸ್ತನ್ಯಪಾನ್ಯ ಸಪ್ತಾಹ ಕಾರ್ಯಕ್ರಮವನ್ನು ನಡೆಸಲಾಯಿತು. ಸ್ತನ್ಯಪಾನ್ಯದ ಬಗ್ಗೆ ಪ್ರಮೀಳಾರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ತಾ.ಪಂ.ಸದಸ್ಯ ತೀರ್ಥರಾಮ ಜಾಲ್ಸೂರು, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ,ತಾ.ಪಂ‌.ಅಧ್ಯಕ್ಷ ಚನಿಯ ಕಲ್ತಡ್ಕ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀಮತಿ ತಿಲಕ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶೈಲಜಾ ಸ್ವಾಗತಿಸಿ, ಸುಬ್ಬಯ್ಯ ವಂದಿಸಿದರು. ನಿವೇದಿತಾ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.