HomePage_Banner
HomePage_Banner
HomePage_Banner

ಗುತ್ತಿಗಾರು: ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಸಾರ್ವಜನಿಕ ಶಿಕ್ಷಣ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ದ.ಕ., ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇದರ ವತಿಯಿಂದ ತಾಲ್ಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟವು ಆ. 2೦ರಂದು ನಡೆಯಿತು.

ದೈಹಿಕ ಶಿಕ್ಷಣ ಪರಿವೀಕ್ಷಕರಾದ ಲಕ್ಷ್ಮೀಶ ರೈ ಕೆ. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷ ಅಚ್ಯುತ ಗುತ್ತಿಗಾರು ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷ ಣಾಧಿಕಾರಿ ಎಸ್.ಪಿ. ಮಹದೇವ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀದೇವಿ ಕೊಂಬೆಟ್ಟು, ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ವಿಜೇಶ್ ಹಿರಿಯಡ್ಕ ಉಪಸ್ಥಿತರಿದ್ದರು.
ಸುಳ್ಯ ತಾಲ್ಲೂಕಿನ ವಿವಿಧ ಶಾಲೆಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಬಾಲಕರ ವಿಭಾಗದಲ್ಲಿ ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಪ್ರಥಮ, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಕೊಯಿಕುಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಗಳಿಸಿತು.
ಸಮಾರೋಪ ಸಮಾರಂಭದಲ್ಲಿ ಗುತ್ತಿಗಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಜಯಂತಿ ಅಮೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಲಕ್ಷ್ಮಿಶ್ರೀ ಕೆ., ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಕುಲಶ್ರೀ ಬಾಕಿಲ ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು. ಮುಖ್ಯ ಶಿಕ್ಷಕಿ ಕಮಲಾಕ್ಷಿ ಸ್ವಾಗತಿಸಿ, ದೈ. ಶಿ.ಶಿಕ್ಷಕ ದಯಾನಂದ ಮುತ್ಲಾಜೆ ವಂದಿಸಿದರು. ಮೊಗ್ರ ಶಾಲಾ ಶಿಕ್ಷಕ ಶಶಿಧರ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.