HomePage_Banner
HomePage_Banner
Breaking News

ಬೆಳ್ಳಾರೆ: ಸ್ನೇಹಿತರ ಕಲಾ ಸಂಘದಿಂದ ಗುರರತ್ನ ಪ್ರಶಸ್ತಿ ಪ್ರದಾನ, ಸನ್ಮಾನ

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 21ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ, ಕ್ರೀಡಾ ಸ್ಪರ್ಧೆಗಳು, ಸಭಾ ಮತ್ತು ಸನ್ಮಾನ ಕಾರ್ಯಕ್ರಮ ಆ. 25ರಂದು ಬೆಳ್ಳಾರೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಧ್ಯಾಹ್ನ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ಕುರುಂಬುಡೇಲುರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಶ್ರೀಮತಿ ಮೋಹಿನಿ ಬೆಳ್ಳಾರೆಯವರಿಗೆ ಗುರುರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ನಿವೃತ್ತ ಯೋಧರಾದ ಪದ್ಮನಾಭ ಗೌಡ ಬಾಳಿಲ ಮತ್ತು ಶ್ರೀಮತಿ ಪಿ.ಟಿ. ಮಹಾದೇವಿ ಪದ್ಮನಾಭರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ, ಸಾಹಿತಿ, ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಪ್ರಭಾಕರ ಶಿಶಿಲ, ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಯಾಕರ ಆಳ್ವ, ಸುಳ್ಯ ಯುವಜನ ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ ಅಧ್ಯಕ್ಷ ಅಮೃತ್ ಕುಮಾರ್ ಕಿಲಂಗೋಡಿ, ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷ ಆನಂದ ಗೌಡ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸದಸ್ಯ ವಸಂತ ಉಲ್ಲಾಸ್ ಸ್ವಾಗತಿಸಿ ಕಾರ್ಯದರ್ಶಿ ಸಂಜಯ್ ನೆಟ್ಟಾರ್ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.