ಯೇನೆಕಲ್ಲು ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಶಿವರಾಮರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle
Advt_Headding_Middle

 ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸುಮಾರು 37 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಶಿವರಾಮ ಗೌಡರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸೆ. 3 ರಂದು ಸಂಘದ ಸಭಾಭವನ ಸಂತೃಪ್ತಿ ಸಹಕಾರಿ ಸೌಧದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ನಿವೃತ್ತರನ್ನು ಸನ್ಮಾನಿಸಿದರು. ಮುಖ್ಯ ಅತಿಥಿಯಾಗಿ ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಶೀಲ ಹೊಸಮನೆ ಭಾಗವಹಿಸಿದ್ದರು. ಕು. ಭಾಗ್ಯಶ್ರೀಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಂಘದ ಅಧ್ಯಕ್ಷ ಕೆ.ಎಸ್. ದೇವರಾಜ್ ಪ್ರಾಸ್ತಾವಿಕ ಮಾತುಗಳೊಂದಿಗೆ ಅಭಿನಂದನಾ ಭಾಷಣ ಮಾಡಿದರು. ಸಂಘದ ನಿರ್ದೇಶಕರುಗಳಾದ ಶ್ರೀಮತಿ ಲೀಲಾವತಿ ಉಪ್ಪಳಿಕೆ, ವೆಂಕಟರಮಣ ಕೆ.ವಿ, ದಯಾನಂದ ಕುಕ್ಕಪ್ಪನಮನೆ, ಪೂರ್ಣಚಂದ್ರ ತುಂಬತ್ತಾಜೆ, ಶ್ರೀಮತಿ ಅನಿತಾ ಪಿ.ಆರ್, ಭಾಸ್ಕರ ಪೂಜಾರಿ, ಸುರೇಶ್ ನೆಕ್ರಾಜೆ, ಪೆರ್ನ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎ.ಎಸ್. ಮತ್ತು ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕೆ.ಆರ್. ರಾಜ್ಯ ಭಜನಾ ಪತಿಷತ್ ಸದಸ್ಯ ಬಾಲಕೃಷ್ಣ ಪುತ್ಯ ಶಿವರಾಮ ಬಾನಡ್ಕರ ಪತ್ನಿ ಶ್ರೀಮತಿ ಯೋಗೀಶ್ವರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎನ್.ಕೆ. ಮನೋಹರ ನಾಳ ಸ್ವಗತಿಸಿ ನಿರ್ದೇಶಕ ಪೂರ್ಣಚಂದ್ರ ತುಂಬತ್ತಾಜೆ ವಂದಿಸಿದರು. ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಕಾರ್ಯದರ್ಶಿ ಮಲ್ಲಾರ ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ ಸಮಾರಂಭದ ಆರಂಭದಲ್ಲಿ ಕ್ಯಾಂಪ್ಕೋ ರಬ್ಬರ್ ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.‌ಸತೀಶ್ಚಂದ್ರ ಉದ್ಘಾಟಿಸಿದರೆ ಲಿಪ್ಟನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ ಶುಭ ಹಾರೈಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.