HomePage_Banner
HomePage_Banner

ಅಡ್ಕಾರು : ಅಂಜನಾದ್ರಿಯಲ್ಲಿ ಸೋಣ ಶನಿವಾರ ಪ್ರಯುಕ್ತ ಭಜನಾ ಸೇವೆ 


ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಸೋಣ ಶನಿವಾರ ಆಚರಣೆಯ ಪ್ರಯುಕ್ತ ಭಜನಾ ಸೇವೆ ಹಾಗೂ ಬಲಿವಾಡು ಕೂಟವು ಸೆ.7ರಂದು ಜರುಗಿತು.


ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವೇ.ಮೂ.ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ಪುತ್ತೂರು ತಾಲೂಕಿನ ಪಡುಮಲೆ ಸರ್ವಶಕ್ತಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರುಗಿತು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ಆಡಳಿತ ಮಂಡಳಿ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.