HomePage_Banner
HomePage_Banner
HomePage_Banner

ಬೆಳ್ಳಾರೆ ಜ್ಞಾನದೀಪದಲ್ಲಿ ನರ್ಸರಿ ಶಿಕ್ಷಕಿಯರ ಪ್ರಮಾಣ ಪತ್ರ ವಿತರಣೆ, ಸನ್ಮಾನ

ಭಾರತ ಸರಕಾರದ ರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಿಂದ ಪ್ರವರ್ತಿತ ಭಾರತ್ ಸೇವಕ್ ಸಮಾಜದ ವತಿಯಿಂದ ಬೆಳ್ಳಾರೆ ಮತ್ತು ಸುಳ್ಯದಲ್ಲಿ ನಡೆಸಲ್ಪಡುತ್ತಿರುವ ಜ್ಞಾನದೀಪ ನರ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ೨೦೧೮-೧೯ನೇ ಸಾಲಿನ ವಿದ್ಯಾರ್ಥಿ ಶಿಕ್ಷಕಿಯರುಗಳ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಸುಲೋಚನಾ ಚಂದ್ರಹಾಸ ಪಡ್ಪು ೨೦೧೮-೧೯ನೇ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಅನಿತಾ, ರೇಖಾ, ಶಶಿಕಲಾ, ಚೈತ್ರಾ, ಸುಮಿತ್ರಾ ಇವರುಗಳನ್ನು ಸನ್ಮಾನಿಸಿ ಶುಭಹಾರೈಸಿದರು. ನರ್ಸರಿ ಶಿಕ್ಷಕಿಯರ ತರಬೇತಿಯ ಶಿಕ್ಷಕಿ ಗೀತಾ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಲಿಕ್ಷಿತಾ, ಉಪನ್ಯಾಸಕಿ ನಿಶಾ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.