ಚಂದ್ರಶೇಖರ ಪೇರಾಲು, ದಯಾನಂದ ಉಚ್ಚಿಲ, ನಟರಾಜ್ ಮಾಸ್ತರ್, ಜಾನಕಿಯವರಿಗೆ `ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸಹಯೋಗದೊಂದಿಗೆ ನೀಡುವ `ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದು, ಅವರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಸುಳ್ಯದ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.

 

 

ಮಕ್ಕಳಿಗೆ `ಗಣಿತ ಮನೆ ಪಾಠ’ ಹೇಳಿಕೊಟ್ಟು ಅನೇಕ ವಿದ್ಯಾರ್ಥಿಗಳಿಗೆ ದಾರಿದೀಪವಾದ ಕರ್ನಾಟಕ ಅಭಿವೃದ್ಧಿ ನಿಗಮದ ನಿವೃತ್ತ ಕಛೇರಿ ಅಧೀಕ್ಷಕರಾದ ದಯಾನಂದ ಉಚ್ಛಿಲ, ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸಿ ರಾಜ್ಯಮಟ್ಟದಲ್ಲೇ ಉತ್ತಮ ಅಧಿಕಾರಿ ಎಂದು ಗುರುತಿಸಲ್ಪಟ್ಟು ಉತ್ತಮ ಸಮನ್ವಯಾಧಿಕಾರಿ ಎಂಬ ಪ್ರಶಸ್ತಿಗೆ ಭಾಜನರಾದ ಎಲಿಮಲೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್, ಶೈಕ್ಷಣಿಕ ಕರ್ತವ್ಯದ ಜೊತೆಗೆ ಶಶಾಂಕ ಚಾರಿಟೇಬಲ್ ಟ್ರಸ್ಟ್‌ನ್ನು ಸ್ಥಾಪಿಸಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಪ್ರತೀ ವರ್ಷ ನೆರವು ನೀಡುತ್ತಿರುವ ಏನೆಕಲ್ಲು ಗ್ರಾಮದ ಬಾನಡ್ಕ ಶಾಲೆಯ ಶಿಕ್ಷಕಿ ಜಾನಕಿ.ಕೆ, ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುವುದರೊಂದಿಗೆ ಸುಳ್ಯದಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳ ಆಚರಣೆಯ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಸುಳ್ಯ ಜ್ಯೂನಿಯರ್ ಕಾಲೇಜಿನ ದೈ.ಶಿ.ಶಿಕ್ಷಕ ನಟರಾಜ್ ಮಾಸ್ತರ್ ರವರಿಗೆ ಮಲೆನಾಡ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

 

 

 

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಭಾಷಣಗೈದರು.

 

ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕಾರ್ ಅಧ್ಯಕ್ಷತೆ ವಹಿಸಿದ್ದರು. 

 

ತಾಲೂಕು ವೈದ್ಯಾಧಿಕಾರಿ ಡಾ.ಭಾನುಮತಿ, ಕೆವಿಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್, ವಲಯ  ಅರಣ್ಯಾಧಿಕಾರಿ ಮಂಜುನಾಥ್, ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಐ.ಇಸ್ಮಾಯಿಲ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಹಮೀದ್ ಜನತಾ, ಅನ್ಸಾರಿಯಾ ಯತೀಂಖಾನ  ಅಧ್ಯಕ್ಷ ಮಜೀದ್ ಜನತಾ, ಸಜ್ಜನ ಪ್ರತಿಷ್ಠಾನದ ರಹೀಂ ಬೀಜದಕಟ್ಟೆ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಲತಾ ಎಂ.ರೈ, ಶಿಕ್ಷಣ ಸಂಯೋಜಕ ಚಂದ್ರಶೇಖರ ಅತಿಥಿಗಳಾಗಿದ್ದರು.

 

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಅಮರನಾಥ ಬಿ.ಪಿ.ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ಬೀರಮಂಗಲ ಕಾರ್ಯಕ್ರಮ ನಿರೂಪಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.