ಉಬರಡ್ಕ ಮಿತ್ತೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle


ಉಬರಡ್ಕ ಮಿತ್ತೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಾಣಿ ಜೆ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ 20 ರಂದು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘವು 2018-19ನೇ ಸಾಲಿನಲ್ಲಿ 196406ರೂ. ಲಾಭ ಗಳಿಸಿ ಸದಸ್ಯರಿಗೆ ಪ್ರತೀ 1 ಲೀಟರ್ ಗೆ 1.36ಪೈಸೆಯಂತೆ ಬೋನಸ್ ನೀಡಲಾಯಿತು. ಸಭೆಯಲ್ಲಿ ದ.ಕ. ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ. ಕೇಶವ ಸುಳ್ಳಿ ದನಗಳ ಬಗ್ಗೆ ಮಾಹಿತಿ ನೀಡಿದರು. ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ನಾಗೇಶ್ ಅವರು ಒಕ್ಕೂಟದಿಂದ ದೊರೆಯುವ ಯೋಜನೆಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಸಂಘದ ಕಾರ್ಯದರ್ಶಿ ಕುಸುಮಾಧರ ರವರು ವರದಿ ಮಂಡಿಸಿದರು. 2018- 19 ನೇ ಸಾಲಿನಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ಹಾಕಿದ ನಾಲ್ಕು ಸದಸ್ಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಸುಜಾತಾ ಬಿ ರಾವ್ ಮತ್ತು ನಿರ್ದೇಶಕರು ಉಪಸ್ಥಿತರಿದ್ದರು. ಹಾಲು ಪರೀಕ್ಷಕಿ ಕೆ. ರೂಪ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.