HomePage_Banner
HomePage_Banner
Breaking News

ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಉದ್ಘಾಟನೆ

ದ.ಕ ಜಿ.ಪಂ,ಯುವ ಸಬಲೀಕರಣ ಕ್ರೀಡಾ ಇಲಾಖೆ, ತಾ.ಪಂ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಗ್ರಾ.ಪಂ ಗುತ್ತಿಗಾರು ಇವರ ಸಹಕಾರದೊಂದಿಗೆ, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಆಶ್ರಯದೊಂದಿಗೆ ಸುಳ್ಯ ತಾಲೂಕು 2019-20 ರ ದಸರಾ ಕ್ರೀಡಾ ಕೂಟವು ಸೆ.15 ರಂದು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಕ್ರೀಡಾ ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಜಿ.ಪಂ ಸದಸ್ಯರಾದ ಶ್ರೀಮತಿ ಆಶಾ ತಿಮ್ಮಪ್ಪ ಧ್ವಜಾರೋಹಣ ಗೈದರು.ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ತಾಲೂಕು
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸರಕಾರಿ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ,ನಿವೃತ್ತ ಯುವ ಸಬಲೀಕರಣ ಕ್ರೀಡಾಧಿಕಾರಿ ಮಾಧವ ಬಿ.ಕೆ,ಗುತ್ತಿಗಾರು ಸ.ಪ.ಪೂ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ್,ಗುತ್ತಿಗಾರು ಸ.ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಆರ್ ಲೋಕೇಶ್ವರ ,ಗುತ್ತಿಗಾರು ಸ.ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ಪಿ.,ಗುತ್ತಿಗಾರು ಸ.ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ನೆಲ್ಸನ್ ಕ್ಯಾಸ್ಟಲಿನೋ,ಹಿರಿಯ ಕ್ರೀಡಾಪಟು ತಿಮ್ಮಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯುವ ಸಬಲೀಕರಣ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಸ್ವಾಗತಿಸಿ, ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ವಿಜೇಶ್ ಹಿರಿಯಡ್ಕ ವಂದಿಸಿದರು. ಶಿವಪ್ರಸಾದ್ ಹಾಲೆಮಜಲು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.