HomePage_Banner
HomePage_Banner
Breaking News

ಬೆಳ್ಳಾರೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಸಂಘಟನೆಗಳಿಂದ ಸಮಾಜದ ಅಭಿವೃದ್ಧಿ – ಶಾಸಕ ಎಸ್.ಅಂಗಾರ
ಪ್ರತಿಯೊಂದು ಜಾತಿಯಲ್ಲಿ ಸಂಘಟನೆಗಳು ಇರುತ್ತವೆ.ಪರಸ್ಪರ ನಂಬಿಕೆಯಿಂದ ಯುವಕರು ಸಂಘಟಿತರಾಗಿ ಕೆಲಸ ಮಾಡಬೇಕು.ಜಾತಿಯಲ್ಲಿ ಕೀಳರಿಮೆ ಇರಬಾರದು.ಯಾವುದೇ ಸಮಸ್ಯೆಗಳನ್ನು ಎದುರಿಸುವ ಶಕ್ತಿಯನ್ನು ಸಂಪಾದನೆ ಮಾಡಬೇಕು ಸಮಾಜದಲ್ಲಿ ಪ್ರತಿಯೊಬ್ಬನು ತನ್ನ ಬುದ್ಧಿ ಶಕ್ತಿಯನ್ನು ಉಪಯೋಗಿಸಿಕೊಂಡು ಮುಂದೆ ಬರಬೇಕು. ಸಮಾಜದ ಅಭಿವೃದ್ಧಿಯ ಜೊತೆಗೆ ಸಂಘನೆಗಳು ಕೆಲಸ ಮಾಡುವುದರೊಂದಿಗೆ ನಾವು ಅಭಿವೃದ್ಧಿ ಹೊಂದಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.


ಅವರು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಕರ್ನಾಟಕ ಸರಕಾರ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ.೧೫ ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ೧೬೫ ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ನಾರಾಯಣ ಗುರು ವೈದಿಕ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಹರೀಶ್ ಶಾಂತಿ ಧಾರ್ಮಿಕ ಉಪನ್ಯಾಸ ನೀಡಿದರು.
೨೦೧೮-೧೯ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ೬೦೦ ಅಂಕ ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ಮತ್ತು ಪಿ.ಯು.ಸಿ.ಯಲ್ಲಿ ೫೫೦ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.


ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಕಂದಾಯ ಅಧಿಕಾರಿ ಶ್ರೀಮತಿ ಉಷಾ, ಕಿರುತೆರೆ ನಟಿ ಕೊಡಿಯಾಲದ ಭವ್ಯ ಶ್ರೀ ಪೂಜಾರಿ,ಸುಳ್ಯ ತಾಲೂಕು ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ,ಯುವವಾಹಿನಿ ಅಧ್ಯಕ್ಷ ಪ್ರವೀಣ್ ನೆಟ್ಟಾರು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಂಚಾಲಕ ಕೃಷ್ಣ ಕುಮಾರ್ ಅಲೆಕ್ಕಾಡಿ, ಉಪಸ್ಥಿತರಿದ್ದರು.


ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್ ಸ್ವಾಗತಿಸಿ, ಕಾರ್ಯದರ್ಶಿ ಬಾಲಕೃಷ್ಣ ಕೆ.ನೂಜಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕು.ಶ್ರಾವ್ಯ ಪ್ರಾರ್ಥಿಸಿದರು. ರಾಜೇಶ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.ಧರ್ಮಪಾಲ ಶೇಣಿ ವಂದಿಸಿದರು.
ಬೆಳಿಗ್ಗೆ ಗಣೇಶ್ ಪೂಜಾರಿ ಕೊಲ್ಯ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಗುರುಪೂಜೆ ನಡೆದ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ನಂತರ ಅನ್ನಸಂತರ್ಪಣೆ ನಡೆಯಿತು. ಬಿಲ್ಲವ ಸಂಘದ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.