HomePage_Banner
HomePage_Banner
Breaking News

ಎನ್ನೆಂಸಿ: ಪ್ರತಿಭಾ ದಿನಾಚರಣೆ ಮತ್ತು ಶಿಕ್ಷಕರ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಪ್ರತಿಭಾ ದಿನವನ್ನು ಎ.14ರಂದು ಜಂಟಿಯಾಗಿ ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿರುವ ಪ್ರೊ. ಬಾಲಚಂದ ಗೌಡ ಆಗಮಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾಗಿರುವ ಡಾ.ಕೆ. ಗಿರಿಧರ ಗೌಡರವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬಳಿಕ ಪ್ರತಿಭಾ ದಿನವನ್ನು ಆಚರಿಸಲಾಯಿತು. ಎಲ್ಲಾ ತರಗತಿಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ವೇದಿಕೆಯಲ್ಲಿ ವ್ಯಕ್ತಪಡಿಸಿದರು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂತಿಮ ಬಿ ಎಸ್ಸಿ -ಪ್ರಥಮ ಸ್ಥಾನ, ದ್ವಿತೀಯ ಬಿ ಎಸ್ಸಿ- ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ ಕಾಂ ಬಿ -ತೃತೀಯ ಸ್ಥಾನವನ್ನು ಪಡೆದುಕೊಂಡರು. ಕಾಲೇಜಿನ ವಿದ್ಯಾರ್ಥಿ ನಾಯಕ ಕೃಷ್ಣ ಪ್ರಸಾದ್ ಸ್ವಾಗತಿಸಿದರು ಹಾಗೂ ಮೋನಿಷಾ ವಂದಿಸಿದರು. ಹಾಗೂ ಅಶ್ವತ್ಥ್‌ರವರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.