HomePage_Banner
HomePage_Banner
HomePage_Banner
HomePage_Banner

ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

 

ಬಾಲಕರ ವಿಭಾಗದಲ್ಲಿ ಮಂಗಳೂರಿನ ವಿಕಾಸ್ ಕಾಲೇಜು, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ಪ್ರಥಮ

ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ ಆಶ್ರಯದಲ್ಲಿ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಮಂಗಳೂರು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಮೂಡಬಿದಿರೆ ಆಳ್ವಾಸ್ ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪ್ರಶಸ್ತಿ ಪಡೆದವು. ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ, ಬಂಟ್ವಾಳ ತಾಲ್ಲೂಕಿನ ಕಾರ್ಮೆಲ್ ಪದವಿ ಪೂರ್ವ ಕಾಲೇಜು ತೃತೀಯ, ಮತ್ತು ಮಂಗಳೂರು ಗ್ರಾಮಾಂತರ ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ಮೂಡಬಿದಿರೆ ಚತುರ್ಥ ಸ್ಥಾನ ಪಡೆದವು.
ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ಉಜಿರೆ ಎಸ್.ಡಿ.ಎಂ. ಕಾಲೇಜು ದ್ವಿತೀಯ, ಮಂಗಳೂರು ನಗರದ ವಿಕಾಸ್ ಕಾಲೇಜು ತೃತೀಯ ಮತ್ತು ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಚತುರ್ಥ ಸ್ಥಾನ ಪಡೆದಿದೆ.
ಬಾಲಕರ ವಿಭಾಗದಲ್ಲಿ ವೈಯಕ್ತಿಕ ದಾಳಿಗಾರನಾಗಿ ಉಪ್ಪಿನಂಗಡಿ ಪಿ.ಯು ಕಾಲೇಜಿನ ರಾಜೇಶ್, ವೈಯಕ್ತಿಕ ಹಿಡಿತಗಾರನಾಗಿ ಉಪ್ಪಿನಂಗಡಿ ಪಿ.ಯು ಕಾಲೇಜಿನ ಕುಶ, ಸವ್ಯಸಾಚಿಯಾಗಿ ಮಂಗಳೂರು ವಿಕಾಸ್ ಕಾಲೇಜಿನ ಸಂಜಯ್ ಪ್ರಶಸ್ತಿ ಪಡೆದರು.
ಬಾಲಕಿಯರ ವಿಭಾಗದಲ್ಲಿ ಉತ್ತಮ ದಾಳಿಗಾರ್ತಿಯಾಗಿ ಎಸ್.ಡಿ.ಎಂ ಉಜಿರೆಯ ಲಿಖಿತ, ಉತ್ತಮ ಹಿಡಿತ ಗಾರಿಯಾಗಿ ಆಳ್ವಾಸ್ ಕಾಲೇಜಿನ ಅರ್ಚನಾ, ಸವ್ಯಸಾಚಿಯಾಗಿ ಆಳ್ವಾಸ್ ಕಾಲೇಜಿನ ಅಶ್ವಿನಿ ಪ್ರಶಸ್ತಿ ಪಡೆದರು.
ಎನ್.ಎಂ.ಸಿಯ ಶೈಕ್ಷಣಿಕ ಸಲಹೆಗಾರ ಪ್ರೊಫೆಸರ್ ಎಂ. ಬಾಲಚಂದ್ರ ಗೌಡ ವಿಜೇತರಿಗೆ ಬಹುಮಾನ ವಿತರಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಗಿರಿಧರ ಗೌಡ , ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ಲು ಸ್ವಾಗತಿಸಿ ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕಿ ಬೇಬಿವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.