HomePage_Banner
HomePage_Banner
HomePage_Banner
HomePage_Banner

ಕೆ.ವಿ.ಜಿ ಪಾಲಿಟೆಕ್ನಿಕ್ : ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್‌ನ ಬೋಧಕೇತರ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಬದಲಾಗುತ್ತಿರುವ ತಂತ್ರಜ್ಞಾನ ಹಾಗೂ ಸನ್ನಿವೇಶಗಳೊಂದಿಗೆ ಸಿಬ್ಬಂದಿಗಳೂ ಹೊಂದಿಕೊಂಡು ಮುನ್ನಡೆಯಬೇಕಾದರೆ ಕಾಲಕಾಲಕ್ಕೆ ಅನುಭವಸ್ಥರಿಂದ ಮಾಹಿತಿ ಪಡೆದುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಹೇಳಿದರು.

ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಸಿಬ್ಬಂದಿಗಳ ಕರ್ತವ್ಯಗಳು ಹಾಗೂ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕ ನಾರಾಯಣ ತೋರಣಗಂಡಿಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಜಯಪ್ರಕಾಶ್ ಕೆ ಸ್ವಾಗತಿಸಿ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ ವಂದಿಸಿದರು, ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಅನಿಸಿಕೆ ವ್ಯಕ್ತಪಡಿಸಿದರು, ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.