HomePage_Banner
HomePage_Banner
Breaking News

ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್‌ನಿಂದ ಗಾಂಧಿ ನಡಿಗೆ

ಅ. 2 ರಂದು ಮಂಗಳೂರಿನಲ್ಲಿ ನಡೆಯಲಿದೆ ಕಾರ್ಯಕ್ರಮ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಹೇಳಿಕೆ

ಮಹಾತ್ಮಾ ಗಾಂಧೀಜಿಯವರ ೧೫೦ ನೇ ಜನ್ಮದಿನಾಚರಣೆಯ ಪ್ರಯುಕ್ತ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಕ್ಟೋಬರ್ 2 ರ ಗಾಂಧಿ ಜಯಂತಿ ಯಂದು ಮಂಗಳೂರಿನಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ತಿಳಿಸಿದ್ದಾರೆ.

ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ಈ ಗಾಂಧೀ ನಡಿಗೆ ಕಾರ್ಯಕ್ರಮಕ್ಕೆ ಸುಳ್ಯದಿಂದ 5೦೦ ಮಂದಿ ಭಾಗವಹಸಿಲಿದ್ದಾರೆ. ಈ ಕುರಿತಂತೆ ಚರ್ಚಿಸಲು ಸೆ. 23 ರಂದು ಸದರ್ನ್ ರೆಸಿಡೆನ್ಸಿಯಲ್ಲಿ ಸಭೆ ನಡೆಯಲಿದ್ದು, ಇದರಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾಥ್, ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಕೇಂದ್ರ ಸರಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ದೇಶ ಆರ್ಥಿಕ ದುಸ್ಥಿತಿಯಲ್ಲಿದೆ. ವಿದೇಶ ಪರ್ಯಟನೆಯಲ್ಲಿ ತೊಡಗಿರುವ ಮೋದಿ ನೆರೆ ಸಂತ್ರಸ್ತರತ್ತ ಗಮನ ಹರಿಸುತ್ತಿಲ್ಲ. ನೆರೆ ಪರಿಹಾರಕ್ಕೆ ಹಣವನ್ನೂ ಬಿಡುಗಡೆಗೊಳಿಸುತ್ತಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಷಾ ದೇಶವನ್ನು ಸರ್ವಾಧಿಕಾರದತ್ತ ತಳ್ಳಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಸುಧೀರ್ ರೈ ಮೇನಾಲ, ಸತ್ಯಕುಮಾರ್ ಅಡಿಂಜ , ವಕ್ತಾರ ನಂದರಾಜ್ ಸಂಕೇಶ್, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.