HomePage_Banner
HomePage_Banner
Breaking News

ದರ್ಖಾಸ್ತು ಸ.ಹಿ.ಪ್ರಾ.ಶಾಲಾ ಸುವರ್ಣ ಮಹೋತ್ಸವದ ಮನವಿ ಪತ್ರ ಬಿಡುಗಡೆ


ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಖಾಸ್ತು ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು ಡಿಸೆಂಬರ್ ತಿಂಗಳಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಅದರ ಮನವಿ ಪತ್ರವನ್ನು ಅ.7  ರಂದು ಶಾಲಾ ಅಕ್ಷಯ ಕಲಾಮಂದಿರದಲ್ಲಿ ನಡೆದ ಶಾರದಾಂಭೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.


ನಿವೃತ್ತ ಮುಖ್ಯೋಪಾದ್ಯಾಯ ಶಾಂತಾರಾಮ ಕೆ.ಎಸ್., ಗಣಪಯ್ಯ ವನ ಶ್ರೀ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್‌ರವರು ಮನವಿ ಪತ್ರವನ್ನು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ನಟರಾಜನ್ ಡಿ.ಆರ್. ಮತ್ತು ಕಾರ್ಯದರ್ಶಿ ಬಶೀರ್ ಅಹಮ್ಮದ್ ಎನ್. ಶಾರದೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ದರ್ಖಾಸ್ತು,ಗೌರವಾಧ್ಯಕ್ಷ ಸಂಜೀವ ಶೆಟ್ಟಿ ದರ್ಖಾಸ್ತು, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಸುಜಾತ ಜನಾರ್ಧನ,ಮುತ್ತುಮಾರಿಯಮ್ಮ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಕನ್ನದಾಸನ್, ಸುಳ್ಯ ಪೊಲೀಸು ಠಾಣೆಯ ಕ್ರೈ ಸಬ್‌ಇನ್ಸ್‌ಪೆಕ್ಟರ್ ರತ್ನಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ರೂ. 25,೦೦೦ ದೇಣಿಗೆ : ದರ್ಖಾಸ್ತು ದ.ಕ.ಜಿ.ಪ.ಹಿ.ಪ್ರಾ.ಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಶಾಲೆಯಲ್ಲಿ ಮುಖ್ಯೋಪಾಧ್ಯಾರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಾಂತಾರಾಮ ಕೆ.ಎಸ್.ರವರು ರೂ.೨೫,೦೦೦ ದೇಣಿಗೆ ನೀಡುವುದಾಗಿ ಘೋಷಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.