HomePage_Banner
HomePage_Banner

ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರು, ಸೇರ ಕೋಟಿಯಪ್ಪ ಪೂಜಾರಿ, ಯಶ್ವಿತ್ ಕಾಳಮ್ಮನೆಯವರಿಗೆ ಸಮಾಜರತ್ನ ರಾಷ್ಟ್ರೀಯ ಪುರಸ್ಕಾರ

 

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್‌ನವರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕೊಡಮಾಡುವ ಸಮಾಜರತ್ನ ರಾಷ್ಟ್ರೀಯ ಪುರಸ್ಕಾರಕ್ಕೆ ಸುಳ್ಯದ 4 ಮಂದಿ ಆಯ್ಕೆಯಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ, ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ, ದ.ಕ.ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಗಾಂಧಿನಗರ ಪಬ್ಲಿಕ್ ಸ್ಕೂಲ್‌ನ ಪದವೀಧರ ಮುಖ್ಯ ಶಿಕ್ಷಕ ಕೋಟಿಯಪ್ಪ ಪೂಜಾರಿ ಸೇರ, ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳ್ಮಮನೆಯವರು ಸಮಾಜರತ್ನ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ನ.3ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಟಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯುವ ೫ನೇ ವಿಶ್ವಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ 2019 ಹಾಗೂ ಕನ್ನಡ ರಾಜ್ಯೋತ್ಸವ ಸಂಭ್ರಮ ಸಮಾರಂಭದಲ್ಲಿ ಈ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಪ್ರಶಸ್ತಿಗೆ ರಾಜ್ಯದಿಂದ 13 ಮಂದಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.