HomePage_Banner
HomePage_Banner

ವಿನೋಬಾನಗರ: ವಿವೇಕಾನಂದ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾಕೂಟ

ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬದ ಪ್ರಯುಕ್ತ ಕ್ರೀಡಾಕೂಟವು ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಅ.೨೦ರಂದು ಜರುಗಿತು.


ಕ್ರೀಡಾಕೂಟವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣಭಟ್ ಧ್ವಜಾರೋಹಣ ನೆರವೇರಿಸಿ, ಉದ್ಘಾಟಿಸಿದರು.

 

ಮುಖ್ಯ ಅತಿಥಿಗಳಾಗಿ ಸುಳ್ಯ ದೈಹಿಕ ಪರಿವೀಕ್ಷಕ ಲಕ್ಷ್ಮೀಶ ರೈ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮಕ್ಕೆ ಮೊದಲು ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕ್ರೀಡಾಕೂಟದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಪೋಷಕರಿಗೆ, ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಿದವು.


ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷ ಉಪೇಂದ್ರ ಕಾಮತ್ ವಿನೋಬಾನಗರ, ಶ್ರೀಮತಿ ಪದ್ಮಾವತಿ ಕಾಮತ್, ಸಂಚಾಲಕ ಸುಧಾಕರ ಕಾಮತ್ ವಿನೋಬಾನಗರ, ಬೆಳ್ಳಿಹಬ್ಬ ಸಮಿತಿಯ ಪ್ರಧಾನ ಸಂಯೋಜಕ ನ.ಸೀತಾರಾಮ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎನ್.ಗೋಪಾಲರಾವ್, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್ ಕಾಟೂರು, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಪೈಚಾರು, ಬೆಳ್ಳಿಹಬ್ಬ ಸಮಿತಿಯ ಕಾರ್ಯಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಕುಕ್ಕೆಟ್ಟಿ, ಸುಕೇಶ್ ಕೋನಡ್ಕ ಪದವು ಸೇರಿದಂತೆ ಬೆಳ್ಳಿಹಬ್ಬ ಸಮಿತಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕ್ರೀಡಾಕೂಟದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದದವರು ಸಮವಸ್ತ್ರಧಾರಿಗಳಾಗಿ ಗಮನ ಸೆಳೆದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.