HomePage_Banner
HomePage_Banner

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಅ.10ರಂದು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನೆರವೇರಿತು.
ಸಂಸ್ಥೆಯ ಅಧ್ಯಕ್ಷ ರುಕ್ಮಯ್ಯ ದಾಸ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಫಾರ್ಮೆಟ್ ಲಿಮಿಟೆಡ್ ಬೆಂಗಳೂರಿನ ಉಪಾಧ್ಯಕ್ಷ ಡಾ.ಉಮ್ಮರ್ ಬೀಜದ ಕಟ್ಟೆ, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಕ್ರಮ ಸಕ್ಸೇನಾ, ನಿರ್ದೇಶಕರಾದ ಶ್ರೀಮತಿ ಲೀಲಾವತಿ ರುಕ್ಮಯ್ಯದಾಸ್, ನಡುಬೆಟ್ಟು ಕೃಷ್ಣಪ್ಪ, ಕಾರ್ಯದರ್ಶಿ ಕಿಶೋರ್ ಕುಮಾರ್, ಪ್ರಾಂಶುಪಾಲರಾದ ಶೋಭಾ ಕಿಶೋರ್, ಉಪಪ್ರಾಂಶುಪಾಲರಾದ ಅನಸೂಯ ಕೆ.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಉಮ್ಮರ್ ಬೀಜದ ಕಟ್ಟಿಯವರು “ಯಾವುದೇ ಇಂಜಿನಿಯರ್ ಡಾಕ್ಟರನ್ನು ಸೃಷ್ಟಿ ಮಾಡುವವನು ಶಿಕ್ಷಕರು ಆದ್ದರಿಂದ ಶಿಕ್ಷಕರಿಗೆ ಸಮಾಜದಲ್ಲಿ ತುಂಬಾ ಗೌರಯುತವಾದ ಸ್ಥಾನವಿದೆ” ಎಂದು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಕ್ರಮ ಸಕ್ಸೇನಾ ಶಿಕ್ಷಕರಿಗೆ ಚಟುವಟಿಕೆಗಳ ಮೂಲಕ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪ್ರಾಂಶುಪಾಲೆ ಶೋಭಾ ಕಿಶೋರ್ ಸ್ವಾಗತಿಸಿ, ಕಾರ್ಯದರ್ಶಿ ಕಿಶೋರ್ ಕುಮಾರ್
ವಂದಿಸಿದರು. ಸಹ ಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.