HomePage_Banner
HomePage_Banner

ಚಂದನಕೃಷ್ಣಗೆ ರಾಷ್ಟ್ರಮಟ್ಟದಲ್ಲಿ ಕಂಚು

ಸುಬ್ರಹ್ಮಣ್ಯದ ಪತ್ರಕರ್ತ ಮಂಜುನಾಥ ರಾವ್ ಕೃಷ್ಣ ಪ್ಯಾಲೇಸ್ ಮತ್ತು ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಡಾ|.ವೇದಾವತಿ ದಂಪತಿಗಳ ಪುತ್ರಿ ಚಂದನಕೃಷ್ಣ ರಾಜಸ್ಥಾನದಲ್ಲಿ ನಡೆದ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಯೋಜಿತ ವಿದ್ಯಾಭಾರತಿ ರಾಷ್ಟ್ರೀಯ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತ ಪ್ರಾಂತೀಯ ಕ್ರೀಡಾಕೂಟದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಇವರು ಆಯ್ಕೆಯಾಗಿದ್ದರು. ಈಕೆ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿಯ ವಿದ್ಯಾರ್ಥಿನಿ. ಇವಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವಾಣಿ ಮಾರ್ಗದರ್ಶನ ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.