HomePage_Banner
HomePage_Banner

ಕೊಡಿಯಾಲ-ಮೂವಪ್ಪೆಯಲ್ಲಿ 4ನೇ ವರ್ಷದ ದೀಪಾವಳಿ ಕ್ರೀಡಾಕೂಟ,ನಿವೃತ್ತ ಸೈನಿಕರಿಗೆ ಸನ್ಮಾನ

 

ತೀರಾ ಹಿಂದುಳಿದ ಗ್ರಾಮವಾದ ಮೂವಪ್ಪೆಯಲ್ಲಿ ಕಳೆದ 4 ವರ್ಷಗಳಿಂದ ದೀಪಾವಳಿ ಹಬ್ಬವನ್ನು ಊರವರೆಲ್ಲರೂ ಸೇರಿಕೊಂಡು ಆಚರಿಸುತ್ತಿರುವುದಲ್ಲದೇ, ಕ್ರೀಡಾಕೂಟದ ಮೂಲಕ ಜನರನ್ನು ಸಂಘಟಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ರಾಜ್ಯ ಯುವಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ರಾಷ್ಟ್ರ ಮಟ್ಟದ ಯುವಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸುರೇಶ್ ರೈ ಸೂಡಿಮುಳ್ಳು ಹೇಳಿದರು.

ಅವರು ಸ್ನೇಹಿತರ ಬಳಗ(ರಿ)ಕಲ್ಪಡ ಮೂವಪ್ಪೆ ಇದರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ನಡೆದ 4ನೇ ವರ್ಷದ ಸಾಮೂಹಿಕ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಗೌರವಾಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು,ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಕೊಡಿಯಾಲ ಗ್ರಾ.ಪಂ.ಸದಸ್ಯೆ ರಮಾ ಪಿ.ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಿಯಾಲ ಒಕ್ಕೂಟದ ಅಧ್ಯಕ್ಷ ಆನಂದ ಗೌಡ, ಕೊಡಿಯಾಲ ಶಾರಾದೋತ್ಸವ ಸಮಿತಿ ಅಧ್ಯಕ್ಷ ವಿಜಯಚಂದ್ರ ಪೈ ಬಾಚೋಡಿ ಭಾಗವಹಿಸಿದ್ದರು. ಸ್ನೇಹಿತರ ಬಳಗದ ಅಧ್ಯಕ್ಷ ಗಣೇಶ್ ಅಂಗಾರಡ್ಕ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಅಧ್ಯಕ್ಷ ಪ್ರಸಾದ್ ಕಲ್ಪಡ ಸ್ವಾಗತಿಸಿ,ಗಣೇಶ್ ಪೆರ್ಲೋಡಿ ವಂದಿಸಿದರು.ಹರೀಶ್ ಕಲ್ಲಪಣೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸನ್ಮಾನ: ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ರವೀಂದ್ರ ಗೌಡ ರಾಮಕುಮೇರಿ ಇವರನ್ನು ಸನ್ಮಾನಿಸಲಾಯಿತು.

ಉದ್ಘಾಟನೆ: ಕಾರ್ಯಕ್ರಮವನ್ನು ಬೆಳಿಗ್ಗೆ ರಾಮಚಂದ್ರ ಆಚಾರ್ಯ ಮಾಲೆತ್ತಾರು ಉದ್ಘಾಟಿಸಿದರು.ಅತಿಥಿಗಳಾಗಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು, ಮೂವಪ್ಪೆ ಶಾಲಾ ಮುಖ್ಯಗುರು ನಿರ್ಮಲ ಕೆ.ಎಸ್., ಕಲ್ಪಡ ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ಶಿವರಾಮ ಉಪಾಧ್ಯಾಯ, ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವಿಠಲ ಗೌಡ ಭಾಗವಹಿಸಿದ್ದರು.ಕೊಡಿಯಾಲ ಗ್ರಾ.ಪಂ.ಅಧ್ಯಕ್ಷ ಮೋಹನ್ ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು.ಲೋಕೇಶ್ ಕೆ.ವಿ. ಸ್ವಾಗತಿಸಿ, ಮೋಹನ್ ಕೆ.ಟಿ.ವಂದಿಸಿದರು.ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.