HomePage_Banner
HomePage_Banner

ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಡಿ. 1 ರಿಂದ ಡಿ. 5ರ ತನಕ ವೇ.ಮೂ. ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು, ಡಿ. 1 ರಂದು ರಾತ್ರಿ ಪಂಚಮಿ ಕಾರ್ಯಕ್ರಮಗಳು ನಡೆದವು.

ಡಿ. 2 ರಂದು ಬೆಳಿಗ್ಗೆ ರುದ್ರ ಪಾರಾಯಣ ನಡೆಯಿತು. ಮಧ್ಯಾಹ್ನ ಬಾಚೋಡಿ ವೆಂಕಟೇಶ ಪೈ ಕೊಡಿಯಾಲ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಹಿರಿಯರಾದ ಹೆಬ್ಬಾರ ಪರಮೇಶ್ವರಯ್ಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದೇವಳದ ಧರ್ಮದರ್ಶಿ ಸೀತಾರಾಮ ಕೋಟೆ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಸುಬ್ಬಯ್ಯ ಶೇಡಿಕಜೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ನೇರಳತ್ತಾಯ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.