Breaking News

ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಸಂಸ್ಥೆಯ ವಾರ್ಷಿಕ ಕ್ರೀಡಾ ಸಂಭ್ರಮ

Advt_Headding_Middle
Advt_Headding_Middle
Advt_Headding_Middle

ಕ್ರೀಡೆಯಲ್ಲಿ ತೊಡಗಿಸಿಕೊಂಡ ವ್ಯಕ್ತಿ ಆರೋಗ್ಯಪೂರ್ಣ ಜೀವನ ಸಾಗಿಸಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳವಣಿಗೆ ಸಾಧಿಸಲು ಸಹಕಾರಿಯಾಗುತ್ತದೆ. ಶೈಕ್ಷಣಿಕ ಜೀವನದಲ್ಲಿ ಸೋತ ವಿದ್ಯಾರ್ಥಿಗಳಿಗೆ ಪಠ್ಯ ಪೂರಕ ಚಟುವಟಿಕೆಗಳೊಂದಿಗೆ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಅಂತರಾಷ್ಟ್ರೀಯ ಮಟ್ಟದ ಹಿರಿಯ ಕ್ರೀಡಾಪಟು ಸರಸ್ವತಿ ಕಾಮತ್ ಹೇಳಿದರು.


ಅವರು ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವಿದ್ಯಾರ್ಥಿಗಳ ೧೨ನೇ ವರ್ಷದ ವಾರ್ಷಿಕ ಕ್ರೀಡಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೆಳ್ಳಾರೆ ಕಾಲೇಜು ಕ್ರೀಡಾಂಗಣಕ್ಕೆ ಬಂದ ಕ್ರೀಡಾಜ್ಯೋತಿಯ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು ಆಕರ್ಷಕ ಪಥಸಂಚನದ ಮೂಲಕ ಗೌರವ ವಂದನೆ ಸಲ್ಲಿಸಿದರು. ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದ ಸಂಸ್ಥೆಯ ವಿದ್ಯಾರ್ಥಿ ಪುನೀತ್ ಅವರನ್ನು ಸಮ್ಮಾನಿಸಲಾಯಿತು.

ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಪುತ್ಯ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಜೇಸಿಐನ ನಿಯೋಜಿತ ಅಧ್ಯಕ್ಷ ವೀರನಾಥ್, ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಕುರುಂಬುಡೇಲು, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಮಂಜುಳಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಗಾಯತ್ರಿ ಪ್ರಾರ್ಥಿಸಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಸ್ವಾಗತಿಸಿದರು, ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಶಿವಪ್ರಸಾದ್ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.