HomePage_Banner
HomePage_Banner

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ಹಾಗೂ ನೂತನ ಪಾಕಶಾಲಾ ಪ್ರವೇಶೋತ್ಸವ


ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಚಂಪಾಷಷ್ಠಿ ಮಹೋತ್ಸವ ಹಾಗೂ ನೂತನವಾಗಿ ನಿರ್ಮಾಣಗೊಂಡಿರುವ ಪಾಕಶಾಲಾ ಪ್ರವೇಶೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸು ದೇವ ತಂತ್ರಿಗಳ ನೇತೃತ್ವದಲ್ಲಿ ಡಿ.2ರಂದು ನಡೆಯಿತು.


ಡಿ.1ರಂದು ಸಾಯಂಕಾಲ ಶ್ರೀ ದೇವಳದಲ್ಲಿ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ, ರಾತ್ರಿ ಪ್ರಸಾದ ಭೋಜನ ನಡೆಯಿತು. ಡಿ.೨ರಂದು ನೂತನ ಪಾಕಶಾಲೆಯಲ್ಲಿ ಗಣಪತಿ ಹವನನಡೆಯುವುದರ ಮೂಲಕ ನೂತನ ಪಾಕಶಾಲೆಯ ಪ್ರವೇಶೋತ್ಸವ ನಡೆಯಿತು. ನಂತರ ಉಷ:ಪೂಜೆ, ಗಣಪತಿ ಹವನ, ನವಕಪೂಜೆ ನಡೆಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಂತರ ಅಪರಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಆಡಳಿತಾಧಿಕಾರಿ ಹೂವಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಿರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.