HomePage_Banner
HomePage_Banner

ಶಾರದಾ ಕಾಲೇಜು ಎನ್.ಎಸ್.ಎಸ್. ಶಿಬಿರ ಉದ್ಘಾಟನೆ


ಶ್ರೀ ಶಾರದ ಮಹಿಳಾ ಕಾಲೇಜು ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ೮ನೇ ವಾರ್ಷಿಕ ವಿಶೇಷ ಶಿಬಿರವು ಡಿ.21 ರಂದು ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ – ನಾರ್ಕೋಡಿನಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿಯವರು ನೇರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಇವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೋತ್ಸ್ನಾ.ಕೆ.ಇವರು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಗೌಡ ವಿದ್ಯಾ ಸಂಘ(ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ.ಬಿ.ರೇವತಿ ನಂದನ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಬಾಳೆಹಿತ್ಲು, ವಸಂತ್ ಕಲ್ಲೆಂಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ ಕುಡೆಕಲ್ಲು, ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಮಾಜಿ ಅಧ್ಯಕ್ಷ ದಾಮೋದರ ನಾರ್ಕೋಡು, ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಹಿಮಕರ ಚಳ್ಳಂಗಾಯ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾ ರಂಗನಾಥ್ ಇವರುಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕಾಧಿಕಾರಿ ಮಂಜುಶ್ರೀ ಸಿ.ವಿ ಪ್ರಾಸ್ತವಿಕವಾಗಿ ಮಾತನಾಡಿದರು. ಶಿಲ್ಪಾ ಎನ್. ಸ್ವಾಗತಿಸಿ, ರಶ್ಮಿ ಕೆ.ಪಿ.ವಂದಿಸಿದರು. ಊರಿನ ನಾಗರಿಕರು, ಉಪನ್ಯಾಸಕ ವೃಂದ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.