ದೇವರಕಾನ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ , ಸನ್ಮಾನ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಕಾನ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವು ಡಿ.28 ರಂದು ನಡೆಯಿತು.


ಶಾಸಕ ಎಸ್.ಅಂಗಾರರವರು ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ ಧ್ವಜಾರೋಹಣ ನೆರವೇರಿಸಿದರು.
ಎಸ್.ಎಸ್.ಎಲ್.ಸಿಯಲ್ಲಿ ಶೇ 91ಅಂಕ ಗಳಿಸಿದ ಶಾಲೆಯ ಹಿರಿಯ ವಿದ್ಯಾರ್ಥಿ ವಿಖ್ಯಾತ್ ಸಾರಕೆರೆಯವರನ್ನು ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಕಳೆದ ಸಾಲಿನಲ್ಲಿ ಗ್ರಾಹಕ ಸ್ನೇಹಿ ಕಾರ್ಯಕ್ರಮಗಳ ಮೂಲಕ ಮುಖ್ಯಮಂತ್ರಿ ಗಳ ರತ್ನ ಪ್ರಶಸ್ತಿಯ ಸ್ವೀಕರಿಸಿದ ಬೆಳ್ಳಾರೆ ಮೆಸ್ಕಾಂ ನ ಕಿರಿಯ ಇಂಜಿನಿಯರ್ ಪ್ರಸಾದ್ ಕತ್ಲಡ್ಕರವರನ್ನು ಶಾಸಕರು ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿದರು.
2019 – 20 ನೇ ಸಾಲಿನ‌ ದತ್ತಿನಿಧಿ ವಿತರಣೆ ನಡೆಯಿತು.

ಹಸ್ತಪ್ರತಿಯನ್ನು ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು ಬಿಡುಗಡೆಗೊಳಿಸಿದರು.

ಶಾಲೆಗೆ ಕೊಡುಗೆಗಳನ್ನು ನೀಡಿದ ದಾನಿಗಳಿಗೆ ಗೌರವಾರ್ಪಣೆ ನಡೆಯಿತು.

ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಶಾಲಾ ಎಸ್.ಡಿ.ಎಂ
ಸಿ.ಅಧ್ಯಕ್ಷ ನವೀನ್ ಕುಮಾರ್ ಸಾರಕರೆ,ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚಂದ್ರಮತಿ,ಲಿಂಗಪ್ಪ ಬೆಳ್ಳಾರೆ,ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಂ ಪೈ, ರೈತ ಸಂಘದ ಅಧ್ಯಕ್ಷ. ಪದ್ಮನಾಭ ಗೌಡ ನೂಜಾಲು,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಎಡಮಲೆ,ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಜತ್ತಪ್ಪ ಗೌಡ ಪಾರ್ಚೋಡು,ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೀಲಾವತಿ,ಉಮೇಶ್ ಮಾಸ್ತರ್ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ನವೀನ್ ಸಾರಕರೆ ಸ್ವಾಗತಿಸಿ,ಮುಖ್ಯೋಪಾಧ್ಯಾಯಿನಿ ಅನುರಾಧ ಎ.ಆರ್ .ವಂದಿಸಿದರು.ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಸಭಾಕಾರ್ಯಕ್ರಮ ನಡೆದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೊರಂಜನಾ ಕಾರ್ಯಕ್ರಮ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.
ನಂತರ ಬಾಲಕೃಷ್ಣ ನೆಟ್ಟಾರು ಮತ್ತು ಬಳಗದವರು ಪ್ರಸ್ತುತ ಪಡಿಸುವ ರಾಗ ಸಂಗಮ ಮ್ಯೂಸಿಕಲ್ಸ್ – ಸಂಗೀತ ರಸಮಂಜರಿ ನಡೆಯಿತು.

ಶಾಲಾ ಶಿಕ್ಷಕ ವರ್ಗ ದವರು,ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.