Breaking News

ತಾಲೂಕು ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್, ಸೇವಾಸಂಘ ಹಾಗೂ ಸಹಕಾರಿ ಸೊಸೈಟಿ ಇದರ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಸುಳ್ಯ ತಾಲೂಕು ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್, ಸೇವಾ ಸಂಘ ಹಾಗೂ ಸಹಕಾರಿ ಸೊಸೈಟಿ ಇದರ ಪೂರ್ವಭಾವಿ ಸಭೆಯು ಸ್ತ್ರೀ ಶಕ್ತಿ ಸಭಾಭವನ – ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯಲ್ಲಿ ಡಿ.2 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೌಭಾಗ್ಯ ವಿಕಲಚೇನತ ಸಹಕಾರಿ ಸೊಸೈಟಿಯ ಅಧ್ಯಕ್ಷರಾದ ಭರತ್ ಬಿ.ಕೆ. ವಹಿಸಿ, ಸೊಸೈಟಿಯ ರೂಪುರೇಷೆಗಳನ್ನು ತಿಳಿಸಿದರು. ವೇದಿಕೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಸದಸ್ಯ ರಾಧಾಕೃಷ್ಣ ಬೊಳ್ಳೂರು, ನೆಹರೂ ಮೆಮೊರಿಯಲ್ ಕಾಲೇಜಿನ ಹಳೆವಿದ್ಯಾರ್ಥಿ  ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಎಂ.ಕೆ. ಸೌಭಾಗ್ಯ ಸೇವಾ ಟ್ರಸ್ಟ್‌ನ ಗೌರವ ಸಲಹಾ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಪ್ರೇಮಾನಂದ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಕೋ-ಆಪರೇಟಿವ್ ಸೊಸೈಟಿಗೆ ಚಂದ್ರಕೋಲ್ಚಾರ್‌ರವರು ರೂ. ೧೦,೦೦೦ ಧನಸಹಾಯ ನೀಡಿದರು. ಆಶಿಕಾ ನಾರ್ಕೋಡು ಸ್ವಾಗತಿಸಿ, ಮಮತಾ ಖಾರ್ಜ ಧನ್ಯವಾದಗೈದರು. ಮನೋಜ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.