Breaking News

ಜನವರಿ 6 – 8 : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Advt_Headding_Middle
Advt_Headding_Middle

 

ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜನವರಿ 6 ರಿಂದ 8ರವರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಆದೇಶ ನೀಡಲಾಗಿದ್ದು, ಅದರಂತೆ ಈ ಮೂರು ದಿನಗಳಲ್ಲಿ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ‘ಮಿಂಚಿನ ನೋಂದಣಿ’ ಕಾರ್ಯಕ್ರಮ ನಡೆಯಲಿದೆ.

 

ಈ ದಿನಗಳಲ್ಲಿ ಎಲ್ಲಾ ಮತಗಟ್ಟೆಗಳ ಬಿಎಲ್‍ಒಗಳು ಹಾಗೂ ಬಿಎಲ್‍ಒ ಮೇಲ್ವಿಚಾರಕರು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಬಂಧಿಸಿದ ಮತಗಟ್ಟೆಗಳಲ್ಲಿದ್ದು, 18 ವರ್ಷ ತುಂಬಿದ ಅರ್ಹ ಮತದಾರರಿಂದ ನಮೂನೆ 6,7,8 ಹಾಗೂ 8ಎ (ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ತೆಗೆದು ಹಾಕುವಿಕೆ ಹಾಗೂ ವರ್ಗಾವಣೆ) ಅರ್ಜಿಗಳನ್ನು ಸ್ವೀಕರಿಸುವರು. ಅಗತ್ಯ ಇರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಸುಳ್ಯದ ಎಲ್ಲಾ ಬಿಎಲ್ಒ ಗಳಲ್ಲಿ ಸಂಪರ್ಕಿಸಬಹುದು ಎಂದು ಸುಳ್ಯ ತಹಶಿಲ್ದಾರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.