Breaking News

 ದರ್ಖಾಸ್ತು ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ಸಮಾರೋಪ

Advt_Headding_Middle
Advt_Headding_Middle

 

ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳ ಅಭಿವೃದ್ಧಿ – ಎಸ್.ಅಂಗಾರ

ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಪ್ರಾರಂಭ ಮಾಡಿದ ಮೇಲೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ.ಶಿಕ್ಷಕರ ಕೊರತೆ ಇರುವಲ್ಲಿ ಸರಕಾರ ಶಿಕ್ಷಕರನ್ನು ನೇಮಿಸಬೇಕಾಗಿದೆ.ಶಾಲೆಗಳಲ್ಲಿ ಮಕ್ಕಳಿಗೆ ನೀತಿಯ ಪಾಠವನ್ನು ಹೇಳುವ ಜೊತೆಗೆ ಸಂಸ್ಕಾರವನ್ನು ಶಿಕ್ಷಕರು ಹೇಳಿಕೊಡುವ ಅವಶ್ಯಕತೆ ಇದೆ .ಗುಣಮಟ್ಟದ ಶಿಕ್ಷಣ ನೀಡುವುದರಿಂದ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಎಸ್.ಅಂಗಾರ ಹೇಳಿದರು.


ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ,ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತುವಿನಲ್ಲಿ ಜ.04 ರಂದು ನಡೆದ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ
ಮಾತನಾಡುತ್ತಿದ್ದರು.

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥರವರು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ರೂ.50,000 ಅನುದಾನ ನೀಡುವುದಾಗಿ ಹೇಳಿದರು.

ಬೆಳ್ಳಾರೆಯ ವೈದ್ಯರಾದ ಡಾ.ಶಶಿಧರ ಪಡೀಲ್ ಮತ್ತು ಶಾಲೆಗೆ ಡಿಜಿಟಲ್ ಕ್ಲಾಸ್ ಗೆ ಕೊಡುಗೆ ನೀಡಿದ ಮಂಗಳೂರು ವಿನಯ್ ನರ್ಸಿಂಗ್ ಹೋಮ್ ನ ಎಂ.ಡಿ.ಡಾ.ಹಂಸರಾಜ ಆಳ್ವರವರನ್ನು ಶಾಲು ಹೊದಿಸಿ ಫಲ ಪುಷ್ಪ,ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕರಿಗೆ,ಗೌರವ ಸೇವೆ ಸಲ್ಲಿಸಿದ ಶಿಕ್ಷಕರಿಗೆ,ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ,ಬಿಸಿಯೂಟ ಸಿಬ್ಬಂದಿಗಳಿಗೆ,ಅಂಗನವಾಡಿ ಕಾರ್ಯಕರ್ತೆಯರಿಗೆ,ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ವೃಂದದವರಿಗೆ ,ಕಾರ್ಯಕ್ರಮದಲ್ಲಿ ಸಂಪೂರ್ಣ ಸಹಕಾರ ನೀಡಿದ ಶಾರದೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳ ಪರವಾಗಿ ಸಂಘದ ಅಧ್ಯಕ್ಷ ಚಂದ್ರಶೇಖರ ದರ್ಖಾಸ್ತುರವರಿಗೆ ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್,ಮೂಡಬಿದಿರೆ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಹಾಯಕ ಉಪನ್ಯಾಸಕಿ ಶ್ರೀಮತಿ ನೂರ್ ಜಹಾನ್,ಬೈಂದೂರು ವಿಭಾಗದ ಎಲ್.ಐ.ಸಿ.ಅಭಿವೃದ್ಧಿ ಅಧಿಕಾರಿ ಸೋಮನಾಥನ್ ಆರ್,ಸುಳ್ಯ ಪೊಲೀಸ್ ಠಾಣೆ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ ಎಂ,ಗ್ರಾ.ಪಂ.ಸದಸ್ಯ ನವೀನ ಗೌಡ ಎಂ.,ಶಾಲಾ ಹಳೆ ವಿದ್ಯಾರ್ಥಿ ಶ್ರೀಮತಿ ತಾರಾ ಮಾಧವ ಗೌಡ,ಶ್ರೀಮತಿ ಪ್ರೇಮಲತಾ ರೈ ಪುಡ್ಕಜೆ,ಆರ್ .ಕೆ.ಬೆಳ್ಳಾರೆ,ಶಾಂತರಾಮ ಕಣಿಲೆಗುಂಡಿ,ಸುವರ್ಣ. ಮಹೋತ್ಸವ ಸಮಿತಿ ಗೌರವಾಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಸ್ವಾಗತ ಸಮಿತಿ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ,ಎಸ್.ಡಿ.ಎಂ.ಸಿ.ಅಧ್ಯಕ್ಷೆ ಶ್ರೀಮತಿ ಸುಜಾತ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೈವಕುಮಾರ್ ಕೆ, ಸುವರ್ಣ ಮಹೋತ್ಸವ ಸಮಿತಿ ಸಂಚಾಲಕ ವಾಸುದೇವ ನಡ್ಕ,ಕೋಶಾಧಿಕಾರಿ ಉಮೇಶ್ ಗೌಡ,ಸತ್ಯಶಂಕರ ಭಟ್, ವಿದ್ಯಾರ್ಥಿ ನಾಯಕಿ ಸಚಿತ್ರ ಪಿ. ಉಪಸ್ಥಿತರಿದ್ದರು.

ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ಬಶೀರ್ ಅಹಮ್ಮದ್ ನೇಲ್ಯಮಜಲು ಸ್ವಾಗತಿಸಿ,ಅಧ್ಯಕ್ಷ ನಟರಾಜನ್ ಡಿ.ಆರ್.ಪ್ರಾಸ್ತಾವಿಕ ಮಾತನಾಡಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಶಾಲಾ ಪ್ರಭಾರ ಮುಖ್ಯೊಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಶಾಲಾ ವರದಿ ಮಂಡಿಸಿದರು.
ಸನ್ಮಾನ ಪತ್ರವನ್ನು ಗೌರವ ಶಿಕ್ಷಕಿ ಶಮೀಮ ವಾಚಿಸಿದರು.
ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ : ಸಂಜೆ ಅಂಗನವಾಡಿ ಮಕ್ಕಳಿಂದ ,ಶಾಲಾ ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ನಡೆಯಿತು.
ರಾತ್ರಿ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ” ನಿತ್ಯೆ ಬನ್ನಗ ” ತುಳು ಹಾಸ್ಯಮಯ ನಾಟಕ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.