ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Advt_Headding_Middle
Advt_Headding_Middle


ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಿಜ್ಞಾನ ವಿಭಾಗದ ವತಿಯಿಂದ ವಿಜ್ಞಾನ ವಸ್ತು ಪ್ರದರ್ಶನ ಕಾರ್‍ಯಕ್ರಮವು ಜ.೬ ರಂದು ಕಾಲೇಜಿನಲ್ಲಿ ನಡೆಯಿತು.


ಈ ವಿಜ್ಞಾನ ವಸ್ತು ಪ್ರದರ್ಶನ ಕಾರ್‍ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಅಚ್ಯುತ ಪೂಜಾರಿ ಕೆ. ಇವರು ಉದ್ಘಾಟಿಸಿ ವಸ್ತು ಪ್ರದರ್ಶನಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ ವಿಭಾಗದ ಸಂಚಾಲಕರಾದ ಡಾ ಜಯಶ್ರೀ ಕೆ, ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುರೇಶ್ ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಬೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಕು ಲತಾ ಸ್ವಾಗತಿಸಿ, ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುರೇಶ್ ವಂದಿಸಿದರು. ವಿದ್ಯಾರ್ಥಿನಿ ತೃಪ್ತಿ ಕಾರ್‍ಯಕ್ರಮ ನಿರೂಪಿಸಿದರು.


ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳೇ ತಯಾರಿಸಿದ ವಿಜ್ಞಾನದ ಮಾದರಿಗಳು, ವಿಜ್ಞಾನಿಗಳ ಭಾವಚಿತ್ರಗಳು ಇತ್ಯಾದಿ ವಿಜ್ಞಾನಕ್ಕೆ ಸಂಬಂಧಿಸಿದ ವಸ್ತುಗಳನ್ನು ಪ್ರದರ್ಶಿಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಬೇರೆ ಬೇರೆ ಕಾಲೇಜಿನಿಂದ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಈ ಪ್ರದರ್ಶನದ ಪ್ರಯೋಜನ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.